ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಸಾಮೂಹಿಕವಾಗಿ ಏಕಕಾಲದಲ್ಲಿ ಮೊಳಗಿದ ವಂದೇ ಮಾತರಂ ಗೀತೆ
Tuesday, September 29, 2026
ಮಂಗಳೂರು: ವಂದೇ ಮಾತರಂ ಗೀತೆಯ 150 ವರ್ಷಗಳ ಪೂರ್ಣಗೊಂಡಿರುವ ಸಂದರ್ಭದಲ್ಲಿ ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಣ ಸಂಸ್ಥಾನ್ ವತಿಯಿಂದ ಸೆ.25 ರಂದು ಬೆಳಗ್ಗೆ 11 ಗಂಟೆಗೆ ದೇಶದಾದ್ಯಂತ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ ಕಾರ್ಯಕ್ರಮವನ್ನು ಒಂದೇ ಸಮಯದಲ್ಲಿ, ಒಂದೇ ಲಯದಲ್ಲಿ ಆಯೋಜಿಸಲಾಗಿತ್ತು.
‘ನಮಾಮಿ ಭಾರತಮ್ ವಂದೇಮಾತರಂ’ ಶೀರ್ಷಿಕೆಯ ಅಡಿಯಲ್ಲಿ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ 283 ವಿದ್ಯಾರ್ಥಿಗಳು, 70 ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳ ಸಮ್ಮುಖದಲ್ಲಿ ವಂದೇ ಮಾತರಂ ಗೀತೆಯನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಹಾಡಲಾಯಿತು.
ಈ ಸಂದರ್ಭದಲ್ಲಿ ಶಕ್ತಿ ರೆಸಿಡೆನ್ಶಿಯಲ್ ಪ್ರಾಂಶುಪಾಲೆ ಸುರೇಖಾ ಆರ್. ಭಟ್ ಉಪಸ್ಥಿತರಿದ್ದರು.
