ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ ವಲಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಯ ಅತ್ಯುತ್ತಮ ಸಾಧನೆ

ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ ವಲಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಯ ಅತ್ಯುತ್ತಮ ಸಾಧನೆ


ಮಂಗಳೂರು: ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ವತಿಯಿಂದ ಹೈದರಾಬಾದ್ ನಾದೇರ್ಗುಲ್‌ನಲ್ಲಿರುವ ವಿದ್ಯಾಭಾರತಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಸೆಪ್ಟೆಂಬರ್ 4 ರಿಂದ 7 ರವರೆಗೆ ಆಯೋಜಿಸಲಾದ ದಕ್ಷಿಣ ಮಧ್ಯ ಕ್ಷೇತ್ರ ವಲಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿ ವಿಷ್ಣು ರೆಡ್ಡಿ ನಿಂಗಪ್ಪ ಬಿರಾದರ್ ಅತ್ಯುತ್ತಮ ಸಾಧನೆ ಮಾಡಿದ್ದಾರೆ.


17 ವರ್ಷದೊಳಗಿನ ಬಾಲಕರ ವಿಭಾಗದ 400 ಮೀಟರ್ ಓಟದಲ್ಲಿ ಕಂಚಿನ ಪದಕ ಹಾಗೂ 4X400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ಶಾಲೆ ಹಾಗೂ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಯ ಈ ಅತ್ಯುತ್ತಮ ಸಾಧನೆಗೆ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್, ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಸುರೇಖಾ ಭಟ್ ಅವರು ವಿದ್ಯಾರ್ಥಿಯನ್ನು ಅಭಿನಂದಿಸಿ, ಮುಂದಿನ ಸ್ಪರ್ಧೆಗಳಲ್ಲಿಯೂ ಇನ್ನಷ್ಟು ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article