ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಲು ಸೂಚನೆ

ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಲು ಸೂಚನೆ

ಮಂಗಳೂರು: ಪ್ರತಿ ವರ್ಷದಂತೆ ಪ್ರಸಕ್ತ 2026ನೇ ಸಾಲಿನಲ್ಲಿಯೂ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್(POP) ಹಾಗೂ ಭಾರ ಲೋಹ ಮಿಶ್ರಿತ ವಿಷಕಾರಿ ರಾಸಾಯನಿಕ ಗುಣವುಳ್ಳ ವಸ್ತುಗಳನ್ನು ಬಳಸಿ ತಯಾರಿಸಿರುವ ಗೌರಿ-ಗಣೇಶ ಮೂರ್ತಿಗಳ  ಉತ್ಪಾದನೆ, ಸಂಗ್ರಹ ಹಾಗೂ ವಿಸರ್ಜನೆಯನ್ನು ಯಾವುದೇ ನೀರಿನ ಮೂಲದಲ್ಲಿ ವಿಸರ್ಜಿಸುವುದನ್ನು ರಾಜ್ಯಾದಾದ್ಯಂತ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಅಥವಾ ಯಾವುದೇ ರಾಸಾಯನಿಕ ವಸ್ತುಗಳಿಂದ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆಯನ್ನು ನಿಷೇಧಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳ ಸಂಗ್ರಹಣೆ, ಮಾರಾಟ, ವಿತರಣೆ ಹಾಗೂ ಸಾರ್ವಜನಿಕ ಪ್ರದರ್ಶನವನ್ನು ಅನುಮತಿಸಲಾಗುವುದಿಲ್ಲ. ವಿಷಕಾರಿ ಅಥವಾ ಭಾರ ಲೋಹಗಳನ್ನು ಒಳಗೊಂಡಿರುವ ರಾಸಾಯನಿಕ ಬಣ್ಣಗಳಿಂದ ತಯಾರಿಸಲಾದ ಮೂರ್ತಿಗಳ ಉತ್ಪಾದನೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು ಹಾಗೂ ಗಣೇಶೋತ್ಸವ ಸಮಿತಿಗಳು ನೈಸರ್ಗಿಕ ಮಣ್ಣು (Clay) ಹಾಗೂ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಲಾದ ಗಣೇಶ ಮೂರ್ತಿಗಳನ್ನು ಮಾತ್ರ ಬಳಸಬೇಕು. ನೈಸರ್ಗಿಕ ಹಾಗೂ ವಿಷರಹಿತ ಬಣ್ಣಗಳಿಂದ ಅಲಂಕರಿಸಲಾದ ಮೂರ್ತಿಗಳಿಗೆ ಮಾತ್ರ ಆದ್ಯತೆ ನೀಡಬೇಕು. ಯಾವುದೇ ಗಣೇಶನ ಮೂರ್ತಿಗಳನ್ನು ಕೆರೆ, ನದಿ, ಕಾಲುವೆ, ಜಲಾಶಯ ಅಥವಾ ಇತರೆ ಜಲಮೂಲಗಳಲ್ಲಿ ವಿಸರ್ಜಿಸಬಾರದು. 

ಗಣೇಶ ಮತ್ತು ಗೌರಿ ಮೂರ್ತಿಗಳನ್ನು ಸಿದ್ದಪಡಿಸುವವರು / ತಯಾರಿಸುವವರು / ಮಾರಾಟ ಮಾಡುವವರು ವಿಷಪೂರಿತ, ರಾಸಾಯನಿಕವುಳ್ಳ ಬಣ್ಣ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಅನ್ನು ಮೂರ್ತಿಗಳ ತಯಾರಿಕೆಗೆ ಉಪಯೋಗಿಸಬಾರದು. ಒಂದು ವೇಳೆ ಈ ರೀತಿಯ ಮೂರ್ತಿಗಳನ್ನು ತಯಾರಿಸುವುದಾಗಲೀ / ಮಾರಾಟ ಮಾಡುವುದಾಗಲಿ / ಉಪಯೋಗಿಸುವುದಾಗಲಿ ಕಂಡು ಬಂದರೆ ಅಂತಹ ಮೂರ್ತಿಗಳನ್ನು ಮಂಗಳೂರು ಮಹಾನಗರಪಾಲಿಕೆ ವತಿಯಿಂದ ವಶಪಡಿಸಿಕೊಳ್ಳಲಾಗುತ್ತದೆ ಹಾಗೂ ಸಂಬಂಧಪಟ್ಟವರ ವಿರುದ್ಧ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಅಧಿನಿಯಮ-1974, ವಾಯು ಮಾಲಿನ್ಯ ತಡೆ ಮತ್ತು ನಿಯಂತ್ರಣ ಅಧಿನಿಯಮ- 1981 ಹಾಗೂ ಪರಿಸರ ಸಂರಕ್ಷಣೆ ಅಧಿನಿಯಮ-1986 ರ ಅನ್ವಯ ಕ್ರಮ ಜರುಗಿಸಲಾಗುತ್ತದೆ.

ಈ ಸೂಚನೆಗಳನ್ನು ಎಲ್ಲಾ ವ್ಯಾಪಾರಿಗಳು, ತಯಾರಿಕರು ಹಾಗೂ ಗಣೇಶೋತ್ಸವ ಸಮಿತಿಗಳು ಪಾಲಿಸದಿದ್ದಲ್ಲಿ ಸೂಕ್ತ ಕಾನೂನು ಹಾಗೂ ಘನ ತ್ಯಾಜ್ಯ ನಿರ್ವಹಣಾ ನಿಯಮ-2026 ರಡಿ ಕ್ರಮ ಜರುಗಿಸಲಾಗುವುದು ಹಾಗೂ ದಂಡ ವಿಧಿಸಲಾಗುತ್ತದೆ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸ್ವಚ್ಛತೆಗೆ ಆದ್ಯತೆ ನೀಡಿ ಪರಿಸರ ಸ್ನೇಹಿಯಾಗಿ ಗಣೇಶ ಚತುರ್ಥಿಯನ್ನು ಆಚರಿಸುವಂತೆ  ಮಹಾನಗರಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article