ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಸಂಪುಟ ಅನುಮೋದನೆ ಕೋರಿ ವಕೀಲರ ನಿಯೋಗದಿಂದ ಮನವಿ ಸಲ್ಲಿಕೆ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಸಂಪುಟ ಅನುಮೋದನೆ ಕೋರಿ ವಕೀಲರ ನಿಯೋಗದಿಂದ ಮನವಿ ಸಲ್ಲಿಕೆ


ಮಂಗಳೂರು: ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಮತ್ತು ದಕ್ಷಿಣ ಕನ್ನಡದಲ್ಲಿ ವಿಶೇಷ ವಾಗಿ ಮಂಗಳೂರು, ಬಂಟ್ವಾಳ ಹಾಗೂ ಬೆಳ್ತಂಗಡಿಯಲ್ಲಿ ನ್ಯಾಯಾಂಗ ಮೂಲಸೌಕರ್ಯಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಸಚಿವ ಸಂಪುಟದ ಅನುಮೋದನೆ ಕೋರಿ ವಕೀಲರ ನಿಯೋಗ ಮನವಿ ಸಲ್ಲಿಕೆ ಮಾಡಿದೆ.

ಇದಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ವಕೀಲರಿಗೆ ಕೈಗೆಟುಕುವ ದರದಲ್ಲಿ ವಸತಿ ನಿವೇಶನ ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ವಕೀಲರಿಗಾಗಿ ವಸತಿ ಬಡಾವಣೆಗಳನ್ನು ನಿರ್ಮಿಸಲು ಸೂಕ್ತ ಸರಕಾರಿ ಭೂಮಿಯನ್ನು ಮಂಜೂರು ಮಾಡುವಂತೆ ಮತ್ತು ಬಹುಕಾಲದ ಬೇಡಿಕೆ ಈಡೇರಿಸುವಂತೆ ಪ್ರತ್ಯೇಕ ಮನವಿಯನ್ನೂ ಸಲ್ಲಿಸಲಾಗಿದೆ. 

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾಗಿ ಮಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ಮೊಬೈಲ್ ಸಿಗ್ನಲ್ ಜಾಮರ್‌ಗೆ ಸಂಬಂಧಿಸಿದ ವಿಷಯದ ಕುರಿತು ಚರ್ಚಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ್ಯಾಯಾಲಯದ ಮೂಲಸೌಕರ್ಯ ಮತ್ತು ವಕೀಲರ ವಿವಿಧ ಅಗತ್ಯತೆಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

ನ್ಯಾಯಾಂಗ ಮೂಲಸೌಕರ್ಯವನ್ನು ಬಲಪಡಿಸುವುದು, ನ್ಯಾಯಾಂಗ ವ್ಯವಸ್ಥೆ ಸುಧಾರಿಸುವುದು ಹಾಗೂ ಜಿಲ್ಲೆಯ ವಕೀಲರ ಮೂಲಸೌಕರ್ಯ ಮತ್ತು ವಸತಿ ಸಂಬಂಧಿತ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಉದ್ದೇಶದಿಂದ ಈ ಮನವಿಗಳನ್ನು ಸಲ್ಲಿಸಲಾಗಿದೆ.

ಹಿರಿಯ ವಕೀಲ ಅಶ್ವಿನಿ ಕುಮಾರ್ ರೈ, ಸುರೇಶ್ ನವೂರು, ಅರುಣ್ ಬಿ.ಪಿ, ವಿನೋಧರ್ ಪೂಜಾರಿ, ಪ್ರವೀಣ್ ಕುಮಾರ್ ಅಡ್ಯಾರ್ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article