ಅನಧಿಕೃತ ಬೀದಿಬದಿ ವ್ಯಾಪಾರ ತೆರವಿಗೆ ಸೂಚನೆ

ಅನಧಿಕೃತ ಬೀದಿಬದಿ ವ್ಯಾಪಾರ ತೆರವಿಗೆ ಸೂಚನೆ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಪಾದಚಾರಿ ರಸ್ತೆಗಳಲ್ಲಿ ಮತ್ತು ಇನ್ನಿತರೆ ಪ್ರದೇಶದಲ್ಲಿ ಅನಧಿಕೃತವಾಗಿ ಬೀದಿಬದಿ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರ ಹಿತರಕ್ಷಣೆಗೆ ಹಾಗೂ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮತ್ತು ವಿವಿಧ ಸಂಘಟನೆಗಳಿಂದ ದೂರುಗಳು ಬರುತ್ತಿದೆ.

ಮಂಗಳೂರು ಮಹಾನಗರಪಾಲಿಕೆಯಿಂದ ಈಗಾಗಲೇ ಬೀದಿಬದಿ ವ್ಯಾಪಾರದ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣ ಪತ್ರ ಪಡೆದು ಕೊಂಡಿರುವ ಬೀದಿಬದಿ ವ್ಯಾಪಾರಿಗಳನ್ನು ಹೊರತು ಪಡಿಸಿ ಇತರರು ಅನಧಿಕೃತವಾಗಿ ಬೀದಿಬದಿ ವ್ಯಾಪಾರ ಮಾಡುತ್ತಿದ್ದಲ್ಲಿ ವ್ಯಾಪಾರವನ್ನು ಸ್ವಯಂ ಆಗಿ ತೆರವುಗೊಳಿಸಲು ಸೂಚಿಸಲಾಗಿದೆ. ಅನಧಿಕೃತ ಬೀದಿಬದಿ ವ್ಯಾಪಾರವನ್ನು ತೆರವುಗೊಳಿಸದೇ ಇದ್ದಲ್ಲಿ ಬೀದಿಬದಿ ವ್ಯಾಪಾರಿಗಳ ಕಾಯ್ದೆ ಪ್ರಕಾರವಾಗಿ ಅನಧಿಕೃತ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಮಹಾನಗರಪಾಲಿಕೆ ವಲಯ ಆಯುಕ್ತರ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article