ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ
Wednesday, September 9, 2026
ಮಂಗಳೂರು: ಕಳವು ಪ್ರಕರಣಕ್ಕೆ ಸಂಬಂಧಿಸಿ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಮಹಿಳೆಯನ್ನು ಕಾವೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬಂಧಿತೆಯನ್ನು ಮಂಗಳೂರು ಆಕಾಶ ಭವನದ ಆನಂದ ನಗರ ನಿವಾಸಿ ಲತಾ ಮಾರಿಯಾ (44) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ವರ್ಷಗಳ ಹಿಂದೆ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳವು ಗೈದು ಪೊಲೀಸರ ಕೈಗೆ ಸಿಗದೇ ನ್ಯಾಯಾಲಯಕ್ಕೂ ಹಾಜರಾಗದೆ ತಲೆ ಮರೆಸಿಕೊಂಡಿದ್ದಳು ಎನ್ನಲಾಗಿದೆ.
ಪ್ರಕರಣದಲ್ಲಿ ಆರೋಪಿಯ ಬಂಧನವಾಗದಿದ್ದ ಕಾರಣ ಹಿರಿಯ ಸಿಜೆ & ಸಿ.ಜೆ.ಎಮ್ ನ್ಯಾಯಾಲಯವು ಆಕೆಯ ವಿರುದ್ಧ ಬಂಧನದ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆ ಕಾರ್ಯಾಚರಣೆ ಚುರುಕುಗೊಳಿಸಿದ ಪೊಲೀಸರು, ಮಂಗಳೂರು ನಗರದ ಜ್ಯೋತಿ ನಗರದಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.