ಪಶ್ಚಿಮ ವಲಯ ಐಜಿಪಿಯಾಗಿ ಚೇತನ್ ಅಧಿಕಾರ ಸ್ಚೀಕಾರ

ಪಶ್ಚಿಮ ವಲಯ ಐಜಿಪಿಯಾಗಿ ಚೇತನ್ ಅಧಿಕಾರ ಸ್ಚೀಕಾರ


ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಮಹಾ ನಿರೀಕ್ಷಕರಾಗಿ ಆರ್. ಚೇತನ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು ಆರ್. ಚೇತನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 

ಬಳಿಕ ನೂತನ ಪೊಲೀಸ್ ಮಹಾನಿರೀಕ್ಷಕ ಆರ್. ಚೇತನ್ ಅವರು ಅಧಿಕಾರ ವಹಿಸಿಕೊಂಡು ಪಶ್ಚಿಮ ವಲಯದ ಪೊಲೀಸ್ ಆಡಳಿತದ ಜವಾಬ್ದಾರಿ ಸ್ವೀಕರಿಸಿದರು. ಈ ಸಂದರ್ಭ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.

ಪಶ್ಚಿಮ ವಲಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕರ ಸುರಕ್ಷೆಗೆ ಆದ್ಯತೆ ನೀಡುವುದು, ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತದೆ. ಪಶ್ಚಿಮ ವಲಯದಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಒತ್ತು ನೀಡಲಾಗುತ್ತದೆ. ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ನಿಗಾ ವಹಿಸುವಂತೆ ಸೂಚನೆ ನೀಡಲಾಗು ವುದು ಎಂದು ಆರ್. ಚೇತನ್ ಹೇಳಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article