ದಿನಪೂರ್ತಿ ಮೋಡ ಮೋಡ ಮಿಶ್ರೀತ ಬಿಸಿ ವಾತವಾರಣ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಕ್ಷೀಣವಾಗಿದೆ. ಮಂಗಳವಾರ ದಿನಪೂರ್ತಿ ಮೋಡ ಮೋಡ ಮಿಶ್ರೀತ ಬಿಸಿ ವಾತವಾರಣ ಇದ್ದು, ಗ್ರಾಮಿಣ ಭಾಗದ ಹಲವಡೆ ಅಲ್ಪಸ್ವಲ್ಪ ಮಳೆಯಾಗಿದೆ.
ಬುಧವಾರ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ದಿನದಲ್ಲಿ ಒಂದೆರಡು ಸಣ್ಣ ಅವಧಿಯ ಸಮಾನ್ಯ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಸೇರಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಸಣ್ಣ ಹನಿ ಮಳೆಯ ಮುನ್ಸೂಚನೆ ಇದೆ. ನಡುವೆ ಬಿಡುವಿನ ಸಮಯ ಹೆಚ್ಚಿರಬಹುದು. ಈಗಿನಂತೆ ಸೆಪ್ಟೆಂಬರ್ 4 ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು.
ಮಂಗಳವಾರ ಬೆಳಗ್ಗಿನ ವರೆಗೆ ಜಿಲ್ಲೆಯಲ್ಲಿ ಒಟ್ಟು 12.7 ಮಿ.ಮೀ ಮಳೆ ದಾಖಲಾಗಿದೆ. ಜಿಲ್ಲೆಯ ಗರಿಷ್ಠ ಮಳೆ ಬಂಟ್ವಾಳದಲ್ಲಿ 21 ಮಿಮಿ ಮಿ.ಮೀ ಮಳೆಯಾಗಿದೆ. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದ್ದು, ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ದಿನಕ್ಕೆ ಒಂದೆರಡು ಸಣ್ಣ ಅವಧಿಯ ಮಳೆಯ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.