ಮಂಗಳೂರು ಡಿಸಿಪಿಯಾಗಿ ಸ್ಯಾಮ್ ವರ್ಗೀಸ್
Monday, September 7, 2026
ಮಂಗಳೂರು: ಮಂಗಳೂರು ನಗರ ಪೊಲೀಸ್ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹುದ್ದೆಗೆ ಬೆಂಗಳೂರಿನ ಅಪರಾಧ ತನಿಖಾ ವಿಭಾಗದ (ಸಿಐಡಿ) ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ಯಾಮ್ ವರ್ಗೀಸ್ ಅವರನ್ನು ನೇಮಕ ಮಾಡಲಾಗಿದೆ.
ಮಂಗಳೂರಿನಲ್ಲಿ ಡಿಸಿಪಿ ಆಗಿದ್ದ ಮಿಥುನ್ ಎಚ್. ಎನ್. ಅವರನ್ನು ಇತ್ತೀಚೆಗೆ ಗದಗ ಎಸ್.ಪಿ.ಯಾಗಿ ವರ್ಗಾಯಿಸಲಾಗಿತ್ತು.
ಮಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಸ್ಯಾಮ್ ವರ್ಗೀಸ್ ಅವರು ವಹಿಸಿಕೊಳ್ಳಲಿದ್ದಾರೆ.