ಮಂಗಳೂರು ರೈಲ್ವೆ ಜಾಲ ನೈರುತ್ಯ ವಲಯಕ್ಕೆ ಸೇರ್ಪಡೆ: ಸಚಿವ ಅಶ್ವಿನಿ ವೈಷ್ಣವ್‌ಗೆ ಧನ್ಯವಾದ ಸಲ್ಲಿಸಿದ ಸಂಸದ

ಮಂಗಳೂರು ರೈಲ್ವೆ ಜಾಲ ನೈರುತ್ಯ ವಲಯಕ್ಕೆ ಸೇರ್ಪಡೆ: ಸಚಿವ ಅಶ್ವಿನಿ ವೈಷ್ಣವ್‌ಗೆ ಧನ್ಯವಾದ ಸಲ್ಲಿಸಿದ ಸಂಸದ


ಮಂಗಳೂರು: ಮಂಗಳೂರು ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ಮೂಲಕ ಕರಾವಳಿ ಭಾಗದ ಬಹು ದಶಕಗಳ ಬೇಡಿಕೆಯನ್ನು ಈಡೇರಿಸಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಸಚಿವರನ್ನು ಖುದ್ದು ಭೇಟಿಯಾದ ಸಂಸದರು, ಮಂಗಳೂರನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ಪ್ರಕ್ರಿಯೆಗೆ ಸ್ಪಂದಿಸಿದ್ದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಇದೇ ವೇಳೆ ಪ್ರತಿಕ್ರಿಯಿಸಿದ ಸಚಿವರು, ಕರಾವಳಿ ಭಾಗದ ರೈಲ್ವೆ ಯೋಜನೆಗಳಿಗೆ ಮುಂದೆಯೂ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಭೇಟಿ ಬಳಿಕ ಪ್ರತಿಕ್ರಿಯಿಸಿದ ಕ್ಯಾ.ಚೌಟ ಅವರು, "ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದ ಈ ಪ್ರಮುಖ ಆಡಳಿತಾತ್ಮಕ ಬದಲಾವಣೆಯು ಈ ಭಾಗದ ರೈಲ್ವೆ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಿರ್ವಹಣೆಯನ್ನು ಇನ್ನಷ್ಟು ಸಮರ್ಥಗೊಳಿಸುವುದಲ್ಲದೆ, ಕರ್ನಾಟಕದ ರೈಲ್ವೆ ಜಾಲದೊಂದಿಗೆ ಮಂಗಳೂರಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಿದೆ. ಹಲವು ದಶಕಗಳ ಈ ನಿರ್ಧಾರದಿಂದ ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿ ಹಾಗೂ ಪ್ರಯಾಣಿಕರ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ಸಿಗಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article