ಎಸ್‌ಐಟಿಯಿಂದ ಕೈ ಬಿಡಿ: ವೆಂಕಟೇಶ್ ಪ್ರಸನ್ನ

ಎಸ್‌ಐಟಿಯಿಂದ ಕೈ ಬಿಡಿ: ವೆಂಕಟೇಶ್ ಪ್ರಸನ್ನ

ಮಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ದಿಂದ ತನ್ನನ್ನು ಕೈಬಿಡುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್ಪಿ) ವೆಂಕಟೇಶ್ ಪ್ರಸನ್ನ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.

ತಮ್ಮ ಮೇಲೆ ಸೌಜನ್ಯಾ ಕುಟುಂಬಸ್ಥರು ಅವಿಶ್ವಾಸ ವ್ಯಕ್ತಪಡಿಸಿರುವುದರಿಂದ ತನಿಖಾ ತಂಡದಲ್ಲಿ ಮುಂದುವರಿಯಲು ನೈತಿಕ ಪ್ರಶ್ನೆ ಎದುರಾಗಿದೆ. ಆದ್ದರಿಂದ ತನಿಖಾ ತಂಡದಿಂದ ತನ್ನನ್ನು ಕೈಬಿಡುವಂತೆ ವೆಂಕಟೇಶ್ ಪ್ರಸನ್ನ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆ ನಡೆದಿತ್ತು. ಈ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಇದೀಗ ಸೂಚಿಸಿದೆ. ಎಸ್‌ಐಟಿ ರಚಿಸಿ, ಮೂರು ತಿಂಗಳೊಳಗೆ ಅನುಸರಣೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. 

ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್, ಬೆಂಗಳೂರಿನ ಸಿಐಡಿ ಎಸ್ಪಿ ಲೋಕೇಶ್ ಜಗಲಾಸರ್ ಹಾಗೂ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್ಪಿ ವೆಂಕಟೇಶ್ ಪ್ರಸನ್ನರನ್ನು ಎಸ್‌ಐಟಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಇದೀಗ ಎಎಸ್ಪಿ ವೆಂಕಟೇಶ್ ಪ್ರಸನ್ನ ತನಿಖಾ ತಂಡದಿಂದ ಹೊರಬರಲು ನಿರ್ಧರಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article