ಆವೆ ಮಣ್ಣಿನಲ್ಲಿ ಗಣಪತಿ ಮೂರ್ತಿ ರಚನಾ ಸ್ಪರ್ಧೆ

ಆವೆ ಮಣ್ಣಿನಲ್ಲಿ ಗಣಪತಿ ಮೂರ್ತಿ ರಚನಾ ಸ್ಪರ್ಧೆ

ಮಂಗಳೂರು: ಶರಧಿ ಪ್ರತಿಷ್ಠಾನ ಮಂಗಳೂರು ಹಾಗೂ ಕರಾವಳಿ ಚಿತ್ರಕಲಾ ಚಾವಡಿ ಸಹಯೋಗದಲ್ಲಿ 5ರಿಂದ 15 ವರ್ಷದ ಮಕ್ಕಳಿಗಾಗಿ ಆವೆ ಮಣ್ಣಿನಲ್ಲಿ ಗಣಪತಿ ಮೂರ್ತಿ ರಚನಾ ಸ್ಪರ್ಧೆ ಸೆ.13ರಂದು ಮಧ್ಯಾಹ್ನ 3.30ರಿಂದ ಸಂಜೆ 6.30ರವರೆಗೆ ಲಾಲ್ ಬಾಗ್ನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆಯಲಿದೆ.

1ರಿಂದ 4ನೇ ತರಗತಿ, 5ರಿಂದ 7ನೇ ತರಗತಿ ಮತ್ತು 8ರಿಂದ 10ನೇ ತರಗತಿ ಹೀಗೆ ಮೂರು ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಗೆ 1.30 ಗಂಟೆಯ ಅವಽ ನೀಡಲಾಗುತ್ತದೆ. ಆವೆಮಣ್ಣನ್ನು ಪ್ರಾಯೋಜಕರೇ ನೀಡಲಿದ್ದಾರೆ. ನೈಸರ್ಗಿಕ ಬಣ್ಣಗಳಿಂದ, ಎಲೆ, ಹಣ್ಣು ಮುಂತಾದ ನೈಸರ್ಗಿಕ ವಸ್ತುಗಳಿಂದ ಅಲಂಕರಿಸಬಹುದು ಎಂದು ಕರಾವಳಿ ಚಿತ್ರಕಲಾ ಚಾವಡಿಯ ಗೌರವಾಧ್ಯಕ್ಷ ಗಣೇಶ ಸೋಮಯಾಜಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸ್ಪರ್ಧೆಗೆ ಹೆಸರು ನೋಂದಾಯಿಸಲು ಸೆ.11 ಕೊನೆಯ ದಿನ. ವಾಟ್ಸಪ್ ಸಂಖ್ಯೆ 9916777241 ಮೂಲಕ ಮಾತ್ರ ನೋಂದಣಿಗೆ ಅವಕಾಶವಿದೆ. ಪ್ರತಿ ವಿಭಾಗದಲ್ಲಿಯೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ನೀಡಲಾಗುವುದು. ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯ ದಿನ ಕರಾವಳಿ ಚಿತ್ರಕಲಾ ಚಾವಡಿಯ ಕಲಾವಿದರ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗುವುದು ಎಂದು ಅವರು ತಿಳಿಸಿದರು. 

ಗಣಪತಿ ಹಬ್ಬದ ಸಂದರ್ಭದಲ್ಲಿ ಪರಿಸರ ಸ್ನೇಹಿ ಮತ್ತು ಸೃಜನಾತ್ಮಕ ಕಲಾ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸ್ಪರ್ಧೆ ಏರ್ಪಡಿಸಲಾಗಿದೆ. ಮಕ್ಕಳಲ್ಲಿ ಕಲಾ ಪ್ರಜ್ಞೆ, ಪರಿಸರ ಕಾಳಜಿ, ಪ್ಲಾಸ್ಟರ್ ಆಫ್ ಪ್ಯಾರಿಸ್ ನಂತಹ ಹಾನಿಕಾರಕ ವಸ್ತುಗಳ ಬಳಕೆಯನ್ನು ತಪ್ಪಿಸಿ ಪರಿಸರ ಸಂರಕ್ಷಣೆಯ ಸಂದೇಶವನ್ನು ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಗುರಿಯನ್ನು ಈ ಸ್ಪರ್ಧೆ ಹೊಂದಿದೆ. ಇದು ಮಕ್ಕಳ ಸೃಜನಶೀಲತೆ ಮತ್ತು ಕೈಚಳಕವನ್ನು ಪ್ರದರ್ಶಿಸುವ ಅವಕಾಶವಾಗಿದೆ ಎಂದು ಅವರು ವಿವರಿಸಿದರು.

ಶರಧಿ ಪ್ರತಿಷ್ಠಾನದ ಕಾರ್ಯದರ್ಶಿ ಪುನೀಕ್ ಶೆಟ್ಟಿ, ಜತೆ ಕಾರ್ಯದರ್ಶಿ ಜಗದೀಶ್ ಶೆಟ್ಟಿ, ಕರಾವಳಿ ಚಿತ್ರಕಲಾ ಚಾವಡಿಯ ಅಧ್ಯಕ್ಷ ಕೋಟಿ ಪ್ರಸಾದ್ ಆಳ್ವ, ಕಾರ್ಯದರ್ಶಿ ಡಾ. ಜಯಪ್ರಕಾಶ್ ಬಿ. ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article