ರಾಷ್ಟ್ರಗೀತೆಗೆ ಅಪಮಾನ: ವಿಡಿಯೋ ವೈರಲ್
Sunday, September 6, 2026
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಶಿರಾಡಿ ಗ್ರಾಮ ಪಂಚಾಯತ್‌ನಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿರುವ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಪೌಲೋಸ್ ಎಂಬವರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿರುವ ಆರೋಪ ಕೇಳಿಬದಿದೆ. ಗ್ರಾಮ ಪಂಚಾಯತ್ ಸಭೆಯಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ದಿಕ್ಕಾರ ಕೂಗಿ ಪೌಲೋಸ್ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾನೆ ಎನ್ನಲಾಗಿದೆ.
ರಾಷ್ಟ್ರಗೀತೆಗೆ ಅಪಚಾರ ಎಸಗಿರುವ ಪೌಲೋಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಹೇರಲಾಗಿದೆ. ಯಾವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿಲ್ಲ.