ಆರೋಗ್ಯಕರ ಬದುಕಿಗೆ ಆಯುರ್ವೇದ ಸಹಕಾರಿ: ಮಮತಾ ಗಟ್ಟಿ
ಅವರು ಬುಧವಾರ ನಗರದ ಕದ್ರಿ ಲಯನ್ಸ್ ಅಶೋಕ ಸೇವಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯು? ಇಲಾಖೆ ಆಶ್ರಯದಲ್ಲಿ ಆಯು? ಮಹಾವಿದ್ಯಾಲಯಗಳು ಹಾಗೂ ಆಯುಷ್ ಸಂಘಟನೆಗಳ ಸಹಯೋಗದೊಂದಿಗೆ ನಡೆದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಆಯುರ್ವೇದವು ಉತ್ತಮ ಜೀವನಶೈಲಿ ರೂಪಿಸಿಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಆಯುರ್ವೇದದ ಆರೋಗ್ಯ ಸಂರಕ್ಷಣಾ ತತ್ವಗಳನ್ನು ಅಳವಡಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಿಸಬಹುದು. ರೋಗ ಬಂದ ನಂತರ ಚಿಕಿತ್ಸೆ ಪಡೆಯುವ ಬದಲು, ಆರೋಗ್ಯವನ್ನು ಕಾಪಾಡಿಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ರಾಜ್ಯ ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್ ತೆಕ್ಕಿಲ್ ಮಾತನಾಡಿ, ಸಾವಿರಾರು ವರ್ಷಗಳಿಂದಲೂ ದೇಶದಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿ ರೂಢಿಯಲ್ಲಿದೆ. ಆಯುರ್ವೇದವು ಪ್ರಕೃತಿ ಮತ್ತು ಮನುಷ್ಯನ ನಡುವಿನ ಅವಿನಾಭಾವ ಸಂಬಂಧವನ್ನು ಆಧರಿಸಿದ ಆರೋಗ್ಯ ಪದ್ಧತಿಯಾಗಿದೆ. ಮನುಷ್ಯನ ದೈನಂದಿನ ಜೀವನದಲ್ಲಿ ಎದುರಾಗುವ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಆಯುರ್ವೇದದಲ್ಲಿ ಸೂಕ್ತವಾದ ಪರಿಹಾರ ಹಾಗೂ ಆರೋಗ್ಯಕರ ಜೀವನಶೈಲಿಗೆ ಅಗತ್ಯವಾದ ಮಾರ್ಗದರ್ಶನ ದೊರೆಯುತ್ತದೆ ಎಂದು ಅವರು ಹೇಳಿದರು. ಇಂದಿನ ಬದಲಾಗುತ್ತಿರುವ ಜೀವನಶೈಲಿ ಹಾಗೂ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಆಯುರ್ವೇದದ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಲು ಆಯುರ್ವೇದದ ಕ್ರಮಗಳನ್ನು ಅರಿತುಕೊಳ್ಳುವುದು ಅಗತ್ಯ ಎಂದು ಅವರು ಹೇಳಿದರು.
ಡಾ.ಜಯಗೋವಿಂದ ಉಕ್ಕಿನಡ್ಕ ಹಾಗೂ ಶಾರದಾ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಂದೀಪ್ ಬೇಕಲ್ ಉಪನ್ಯಾಸ ನೀಡಿದರು.
ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಶಾಲೆಟ್ ಲವೀನಾ ಪಿಂಟೋ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಲೇಡಿಗೋಶನ್ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಜಿಲ್ಲಾ ಆಯುಷ್ ಅಧಿಕಾರಿ ಮುರಳೀಧರ್ ಇದ್ದರು.