ಸಹಿ ಸಂಗ್ರಹ ಅಭಿಯಾನ
Saturday, September 12, 2026
ಮಂಗಳೂರು: ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಗ್ರಹಿಸಿ, ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆದ ’ಕ್ಯಾಂಪ್ಕೋ’ ಸಂಸ್ಥೆಯ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ವಿಶೇಷ ಸಹಿ ಸಂಗ್ರಹ ಅಭಿಯಾನ ನಡೆಯಿತು.
ಈ ಅಭಿಯಾನದಲ್ಲಿ ಆರ್‌ಎಸ್‌ಎಸ್ ಮುಖಂಡರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಕಮಲಾ ಪ್ರಭಾಕರ್ ಭಟ್, ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಸತೀಶ್ ಚಂದ್ರ ಹಾಗೂ ಸುಮಾರು 2500 ಕ್ಕೂ ಹೆಚ್ಚು ಗೋಭಕ್ತರು ಮತ್ತು ಕೃಷಿಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಸಹಿ ಹಾಕುವ ಮೂಲಕ ತಮ್ಮ ಬೆಂಬಲವನ್ನು ಸೂಚಿಸಿದರು.