ಜೈಲು ಜಾಮರ್ ಮುಖ್ಯಮಂತ್ರಿ ಭೇಟಿ ವೇಳೆ ಪ್ರತಿಭಟನೆ..

ಜೈಲು ಜಾಮರ್ ಮುಖ್ಯಮಂತ್ರಿ ಭೇಟಿ ವೇಳೆ ಪ್ರತಿಭಟನೆ..


ಮಂಗಳೂರು: ಜೈಲು ಜಾಮರ್ ವಿಚಾರದಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುವ ಪ್ರಜಾ ಸೌಧಕ್ಕೆ ಮುತ್ತಿಗೆ ಹಾಕಲು ತೆರಳಲು ಮುಂದಾಗಿದ್ದ ವಕೀಲರನ್ನು ಕೋರ್ಟ್ ಆವರಣದಲ್ಲಿಯೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಜಿಲ್ಲಾ ನ್ಯಾಯಾಲಯ ಬಳಿಯಿಂದ ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ ನೇತೃತ್ವದಲ್ಲಿ  ವಕೀಲರು ತೆರಳುತ್ತಿದ್ದಂತೆ ಪೊಲೀಸರು ಅವರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.


ಸಿಪಿಐಎಂ..

ಕರಾವಳಿ ಕರ್ನಾಟಕದ ಅಭಿವೃದ್ದಿ ನೀತಿಯನ್ನು ಜನಪರವಾಗಿ ರೂಪಿಸಲು ಆಗ್ರಹಿಸಿ, ಕಾರ್ಪೊರೇಟ್ ಪರವಾದ ಪಿಪಿಪಿ ನೀತಿ ಬೇಡ ಶಿಕ್ಷಣ, ಉದ್ಯೋಗ, ಆರೋಗ್ಯ, ವಸತಿ ಒದಗಿಸುವ ನೀತಿ ಬೇಕು ಎಂದು ಒತ್ತಾಯಿಸಿ ದ.ಕ. ಮತ್ತು ಉಡುಪಿ ಸಿಪಿಎಂ ಸಮಿತಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಗೆ ಆಗ್ರಹ ಪತ್ರ ಸಲ್ಲಿಸಲು ಹೊರಟ ಮೆರವಣಿಗೆಯನ್ನು ಶುಕ್ರವಾರ ಬೆಳಗ್ಗೆ ಬೆಂದೂರ್ ವೆಲ್ ವೃತ್ತದ ಬಳಿ ಪೊಲೀಸರು ತಡೆದು, ನಾಯಕರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಬೆಳಗ್ಗೆ ಮೆರವಣಿಗೆಯಲ್ಲಿ ಸಂಪುಟ ಸಭೆಗೆ ತೆರಳಿ ಆಗ್ರಹ ಪತ್ರ ಸಲ್ಲಿಸಲು ಸಿಪಿಎಂ ತಯಾರಿ ನಡೆಸಿತ್ತು. ಮೆರವಣಿಗೆ ಮೊದಲು ಧರಣಿ ನಡೆಸಿದ ಸಿಪಿಎಂ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆ ಕೂಗಿದರು. ೨೧ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಸಿಪಿಎಂ ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್, ದ.ಕ. ಜಿಲ್ಲಾ ಕಾರ್ಯ ದರ್ಶಿ ಮುನೀರ್ ಕಾಟಿಪಳ್ಳ , ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿದರು. 

ಬಳಿಕ ಮೆರವಣಿಗೆ ಹೊರಡುತ್ತಿದ್ದಂತೆ ತಡೆದ ಪೊಲೀಸರು ಸಿಪಿಎಂ ನಾಯಕರನ್ನು, ಕಾರ್ಯಕರ್ತರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು. 

ವಾಹನದಲ್ಲಿ ಸರಕಾರದ ವಿರುದ್ಧ ಘೋಷಣೆ ಕೂಗಿದ ಸಿಪಿಎಂ ನಾಯಕರು ಬೇಡಿಕೆ ಈಡೇರಿಕೆ ಆಗ್ರಹಿಸಿದರು.

ಎಸ್‌ಡಿಪಿಐ

ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಆರೋಪಿಗಳಿಗೆ ಜಾಮೀನು ಮಂಜೂರುಗೊಂಡಿರುವುದನ್ನು ಖಂಡಿಸಿ ಎಸ್ ಡಿಪಿಐ ವತಿಯಿಂದ ಶುಕ್ರವಾರ ಬೆಳಗ್ಗೆ ನಗರದ ಸ್ಟೇಟ್ ಬ್ಯಾಂಕ್ ಬಳಿ ಪ್ರತಿಭಟನೆ ನಡೆಯಿತು.

ನಗರದ ಸ್ಟೇಟ್ ಬ್ಯಾಂಕ್ ನ ರಾವ್ ಆಂಡ್ ರಾವ್ ಸರ್ಕಲ್ ಬಳಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ಮುಖಂಡರನ್ನು  ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಪ್ರತಿಭಟನಾಕಾರರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article