ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಬುಧವಾರ ಮಂಗಳ ಕ್ರೀಡಾಂಗಣದಲ್ಲಿ ಚಾಲನೆ  ನೀಡಲಾಯಿತು.

ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ದಸರಾ ಕ್ರೀಡಾಕೂಟವು   ಕ್ರೀಡಾಪಟುಗಳಿಗೆ ಸಾಮಥ್ರ್ಯವನ್ನು ತೋರಿಸುವ ಉತ್ತಮ  ವೇದಿಕೆಯಾಗಿದ್ದು, ಗ್ರಾಮೀಣ ಪ್ರತಿಭೆಗಳಿಗೆ  ರಾಜ್ಯಮಟ್ಟದವರೆಗೆ  ಭಾಗವಹಿಸಲು ಅವಕಾಶ ದೊರಕುವುದು ಶ್ಲಾಘನೀಯ ಎಂದು ಹೇಳಿದರು.

ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ,  ಯುವಜನರನ್ನು ಪೊರೀತ್ಸಾಹಿಸಲು  ಮತ್ತು ಅವರ  ಕ್ರೀಡಾ ಮತ್ತು ಸಾಂಸ್ಕೃತಿಕ  ಪ್ರತಿಭೆಗೆ ಉತ್ತೇಜನ ನೀಡಲು ರಾಜ್ಯ ಸರಕಾರವು  ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುತ್ತಿದ್ದು, ಪ್ರತೀ ಸಂಘಕ್ಕೆ  ವಾರ್ಷಿಕ 10 ಲಕ್ಷ ರೂ. ನೆರವು ದೊರಕಲಿದೆ ಎಂದು ಹೇಳಿದರು. 

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮಾತನಾಡಿ ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಗಳಾ ಕ್ರೀಡಾಂಗಣದ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಇದರಿಂದ ಕ್ರೀಡಾಂಗಣದ ಸೌಲಭ್ಯಗಳನ್ನು ಮೇಲ್ದರ್ಜೆಗೆ ಏರಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು. 

ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್ ತೆಕ್ಕಿಲ್,   ನೆಹರೂ ಯುವ ಕೇಂದ್ರದ ಉಪನಿರ್ದೇಶಕ ಉಲ್ಲಾಸ್ ಕೆ.ಟಿ, ಹಾಗೂ ವಿವಿಧ ಕ್ರೀಡಾ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ  ಪ್ರದೀಪ್ ಡಿಸೋಜ ಸ್ವಾಗತಿಸಿ, ದೈಹಿಕ  ಶಿಕ್ಷಕ ಮಮಚ್ಚನ್ ವಂದಿಸಿದರು. ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು.

ಇಂದಿನ ಜಿಲ್ಲಾ  ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಒಟ್ಟು 20 ಕ್ರೀಡಾ ಸ್ಪರ್ಧೆಗಳು ನಡೆಯಿತು. ಜಿಲ್ಲಾಮಟ್ಟದಲ್ಲಿ ವಿಜೇತ ಕ್ರೀಡಾಪಟುಗಳು ಮೈಸೂರು ವಿಭಾಗ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article