ಬಳ್ಳಾರಿ ಚಲೋಗೆ: ಜಿಲ್ಲೆಯ ಸಾವಿರಾರು ಕಾರ್ಯಕರ್ತರು

ಬಳ್ಳಾರಿ ಚಲೋಗೆ: ಜಿಲ್ಲೆಯ ಸಾವಿರಾರು ಕಾರ್ಯಕರ್ತರು

ಮಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂ.ಗಳನ್ನು ಲೂಟಿ ಮಾಡಿದ ಕಾಂಗ್ರೆಸ್ ಸರಕಾರವು ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿ ಕನ್ನಡಿಗರಿಗೆ ದ್ರೋಹ ಬಗೆದಿದೆ. 

ದಲಿತರ ಕಲ್ಯಾಣಕ್ಕೆ ಮೀಸಲಿದ್ದ SCSP-TSP ಅನುದಾನವನ್ನು ತಮ್ಮ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ವಾಲ್ಮೀಕಿ ನಿಗಮದ 187 ಕೋಟಿ ರೂ. ಹಣವನ್ನು ಕಾಂಗ್ರೆಸ್ ದುರುಪಯೋಗ ಮಾಡಿದೆ. ಸುಮಾರು 20.19 ಕೋಟಿ ರೂ.ಗೂ ಹೆಚ್ಚು ಮೊತ್ತವನ್ನು ಕಾಂಗ್ರೆಸ್ ತೆಲಂಗಾಣ ಮತ್ತು ಬಳ್ಳಾರಿ ಚುನಾವಣಾ ವೆಚ್ಚಕ್ಕೆ ದುರ್ಬಳಕೆ ಮಾಡಿಕೊಂಡಿದೆ.

ಈ ದುರ್ಬಳಕೆಯಾದ ಹಣವನ್ನು ಸರಕಾರ ಖಜಾನೆಗೆ ಹಿಂಪಡೆಯಲು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸುದೀರ್ಘ ಬೃಹತ್ ಪಾದಯಾತ್ರೆಯು ರಾಯಚೂರು ಜಿಲ್ಲೆಯ ಲಿಂಗಸಗೂರಿನಿಂದ ಬಳ್ಳಾರಿ ನಗರದವರೆಗೆ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಒಟ್ಟು 10 ದಿನಗಳ ಕಾಲ ಸುಮಾರು 185 ಕಿ.ಮೀ. ಪಾದಯಾತ್ರೆಯು ಪ್ರಾರಂಭವಾಗಿದ್ದು, ಈ ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸೆ.8 ರಿಂದ 10 ರ ವರೆಗೆ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article