ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೂವರು ಸೆರೆ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೂವರು ಸೆರೆ


ಮಂಗಳೂರು: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಗಳನ್ನು ಜವಾದ್, ಶಹೀದ್ ಹಾಗೂ ರಿಯಾಝ್ ಎಂದು ಗುರುತಿಸಲಾಗಿದೆ. 

2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಆರೋಪಿಗಳು ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಬಾಲಕನು ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಸೆ.4ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅದರ ಆಧಾರದ ಮೇಲೆ ಅಪರಾಧ ಸಂಖ್ಯೆ 185/2026 ರಿಂದ 190/2026ರವರೆಗೆ ಒಟ್ಟು ಆರು ಪ್ರಕರಣಗಳನ್ನು ದಾಖಲಿಸಲಾಗಿದೆ. 

ಪ್ರಕರಣಗಳನ್ನು ಪೋಕ್ಸೋ ಕಾಯ್ದೆ-2012ರ ಕಲಂ 4(2), 5(m), 6 ಮತ್ತು 8ರ ಅಡಿಯಲ್ಲಿ ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು, ಆರೋಪಿಗಳಾದ ಜವಾದ್, ಶಹೀದ್ ಹಾಗೂ ರಿಯಾಝ್ ನನ್ನು ಬಂಧಿಸಿದ್ದಾರೆ. 

ನ್ಯಾಯಾಲಯವು ಮೂವರು ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ತನಿಖೆಯನ್ನು ವಿಟ್ಲ ಪೊಲೀಸರು ಮುಂದುವರಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article