ರಥಬೀದಿ ಕಾಲೇಜಿನಲ್ಲಿ ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ
Thursday, September 17, 2026
ಮಂಗಳೂರು: ಇಲ್ಲಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಯುವ ರೆಡ್‌ಕ್ರಾಸ್ ಹಾಗೂ ಮಾನಸಿಕ ಆರೋಗ್ಯ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಜಯಕರ ಭಂಡಾರಿ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ವಿಶ್ವವಿದ್ಯಾಲಯದ ಯುವ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕೆಎಂಸಿ ಆಸ್ಪತ್ರೆ, ಮಂಗಳೂರು, ಅರಿವಳಿಕೆ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಂಜನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆಯ ಅಗತ್ಯತೆ, ಸರಿಯಾದ ಸಮಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಪ್ರಥಮ ಚಿಕಿತ್ಸೆಯಿಂದ ಜೀವ ಉಳಿಸುವ ಸಾಧ್ಯತೆಗಳ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕರ್, ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್, ಐಕ್ಯೂಎಸಿ ಸಹ-ಸಂಯೋಜಕಿ ಡಾ. ಜ್ಯೋತಿಪ್ರಿಯಾ ಹಾಗೂ ಮಾನಸಿಕ ಆರೋಗ್ಯ ಸಮಿತಿಯ ಸಂಯೋಜಕ ಡಾ. ಮೊಹಮ್ಮದ್ ಇಕ್ಬಾಲ್ ಬಿ.ಎ., ಯುವ ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಅಶೋಕ ಸಿ.ಎಚ್., ಡಾ. ಜ್ಯೋತಿ ಪಿ. ಹಾಗೂ ಮೈತ್ರಿ ಬಿ. ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿಗಳಾದ ಜಯಶೀಲಾ ನಿರ್ವಹಿಸಿದರು. ನೇಹಾ ಸ್ವಾಗತಿಸಿ, ಖುಷಿ ವಂದಿಸಿದರು. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ 4 ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

