ವಳಚ್ಚಿಲ್ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ವಳಚ್ಚಿಲ್ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿ, ಶಿಕ್ಷಣ ಸಂಸ್ಥೆಯ ಏಳಿಗೆಗೆ ಅಧ್ಯಾಪಕರ ಕೊಡುಗೆ ಅನನ್ಯವಾದುದು. ಮಾತೃ ಋಣ, ಪಿತೃ ಋಣ, ದೇವ ಋಣ ಹಾಗೂ ಪಂಚಭೂತಗಳ ಪ್ರಭಾವಗಳಿಗೆ ಪ್ರತಿಯೊಬ್ಬರೂ ಧನ್ಯರಾಗಿದ್ದಾರೆ ಎಂದರು.
ತಮ್ಮ ವ್ಯಕ್ತಿತ್ವ ರೂಪಿಸಿದ ಗುರುವರ್ಯರನ್ನು ಸ್ಮರಿಸಿದ ಅವರು ಬೋಧನಾ ವೃತ್ತಿಯ ಬಗ್ಗೆ ಆಳವಾದ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಶಿಕ್ಷಕ-ವಿದ್ಯಾರ್ಥಿ ಸಂಬಂಧದ ಶಾಶ್ವತ ಮಹತ್ವದ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಹೆತ್ತವರು ಮತ್ತು ಶಿಕ್ಷಕರ ಪರಿಶ್ರಮವೇ ಕಾರಣ ಎಂದ ಅವರು ಪರಿಪೂರ್ಣ ಜ್ಞಾನ ಆತ್ಮವಿಶ್ವಾಸ ಮೂಡಿಸುತ್ತದೆ. ಗುರುಗಳು ಆಯುಧವಿದ್ದಂತೆ. ಸವಾಲುಗಳನ್ನು ಎದುರಿಸಲು ದಾರಿ ತೋರುವ ಮಾರ್ಗದರ್ಶಕ. ಎಲ್ಲಕ್ಕಿಂತ ಹೆಚ್ಚಾಗಿ ಉತ್ತಮ ಮನುಷ್ಯರನ್ನು ರೂಪಿಸುವ ಶಿಲ್ಪಿ ಎಂದರು.
ಎಕ್ಸ್‌ಪರ್ಟ್ ಹೆಗ್ಗಳಿಕೆ:
ಪ್ರಸಕ್ತ ವರ್ಷ ಎಕ್ಸ್‌ಪರ್ಟ್ ಕಾಲೇಜಿನ 807 ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆದಿದ್ದಾರೆ. 733 ಎಂಬಿಬಿಎಸ್, 74 ಡೆಂಟಲ್, 16 ಏಮ್ಸ್, 2 ಜಿಪ್ ಮರ್ 20 ಬಿಎಂಟಿಸಿ ಸೀಟು ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಎಕ್ಸ್‌ಪರ್ಟ್ ವಿದ್ಯಾರ್ಥಿಗಳಿಗೆ ಲಭಿಸಿದೆ ಇದು ನಮ್ಮ ಸಂಸ್ಥೆಯ ಹೆಗ್ಗಳಿಕೆ ಎಂದರು.
ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಮಾತನಾಡಿ, ತಾಯಿ ಮೊದಲ ಗುರು. ಶಿಕ್ಷಕರು ಕೇವಲ ಶಿಕ್ಷಣ ನೀಡದೆ ಒಂದು ಪರಂಪರೆಯನ್ನು ಸೃಷ್ಟಿಸುತ್ತಾರೆ. ಶಿಸ್ತು ನಮ್ಮ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿದೆ. ಸಮರ್ಪಣಾ ಭಾವದಿಂದ ಕರ್ತವ್ಯ ನಿರ್ವಹಿಸುವ ಗುರುಗಳನ್ನು ಯಾವತ್ತು ಮರೆಯಬಾರದು ಎಂದರು.
ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ರಕ್ಷಿತಾ ಮತ್ತು ಹಿಂದಿ ವಿಭಾಗದ ಮುಖ್ಯಸ್ಥ ಜಗದೀಶ್ ನಾಯ್ಕ್ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಗುರುವಂದನಾ ಕಾರ್ಯಕ್ರಮ:
ಗುರುವಂದನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಉಡುಗೊರೆ ನೀಡಿ ಅಭಿನಂದಿಸಿದರು. ಬಳಿಕ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಂತ್ರಾಕ್ಷತೆ ಹಾಕಿ ಆಶೀರ್ವಾದ ಮಾಡಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಂಸ್ಥೆಯ ಮಾಹಿತಿ ತಂತ್ರಜ್ಞಾನ ನಿರ್ದೇಶಕ ಅಂಕುಶ್ ಎನ್. ನಾಯಕ್, ವಾಸ್ತುಶಿಲ್ಪಿ ದೀಪಿಕಾ ಎ. ನಾಯಕ್, ಟ್ರಸ್ಪಿ ಉಸ್ತಾದ್ ರಫೀಕ್ ಖಾನ್, ಪ್ರಾಂಶುಪಾಲ ಸುಬ್ರಹ್ಮಣ್ಯ ಉಡುಪ, ಉಪಪ್ರಾಂಶುಪಾಲ(ಶೈಕ್ಷಣಿಕ) ಗುರುದತ್ತ ಎನ್, ಉಪಪ್ರಾಂಶುಪಾಲೆ(ಆಡಳಿತ) ಧೃತಿ ವಿ. ಹೆಗ್ಡೆ, ಎಐಸಿಇ ಸಂಯೋಜಕ ಶ್ಯಾಂ ಪ್ರಸಾದ್, ರಸಾಯನಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕ ರಿಚರ್ಡ್ ಗೊನ್ಸಾಲ್ವಿಸ್ ಡಿಸೋಜ, ಭೌತಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕ ಪ್ರಶಾಂತ್ ರಾವ್, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಕವಿತಾ ಡಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಸ್ಮಿತಾ ಮಹೇಶ್ ಶೆಟ್ಟಿ, ಕಾರ್ಯಕ್ರಮ ನಿರ್ದೇಶಕ ವಿಜು ಕಾಮತ್ ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಂಸತ್ತಿನ ಅಧ್ಯಕ್ಷ ಶ್ರೇಯಸ್ ಬಿ. ರೇವಣ್ಣವರ್ ಮತ್ತು ಜತೆ ಕಾರ್ಯದರ್ಶಿ ನಿಶಾ ಶಶಿಧರ್ ಶಿಂಗೆ ಸ್ವಾಗತಿಸಿ, ಕಾರ್ಯದರ್ಶಿ ಪೂಜಿತಾ ಎನ್. ಮತ್ತು ಜತೆ ಕಾರ್ಯದರ್ಶಿ ವಿವಾನ್ ಎ. ಗುಡದಿನ್ನಿ ವಂದಿಸಿದರು.
ಬಳಿಕ ಅಧ್ಯಾಪಕರಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರುಗಿತು.