ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಂದಿ ದಿವಸ್ ಅಂಗವಾಗಿ 'ಗ್ರಂಥಾವಲೋಕನ' ಕಾರ್ಯಕ್ರಮ

ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಂದಿ ದಿವಸ್ ಅಂಗವಾಗಿ 'ಗ್ರಂಥಾವಲೋಕನ' ಕಾರ್ಯಕ್ರಮ


ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಾಲಯ, ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಮತ್ತು ಹಿಂದಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಹಿಂದಿ ದಿವಸ್ ಅಂಗವಾಗಿ ಇಂದು 'ಗ್ರಂಥಾವಲೋಕನ' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಕಾರ್ಯಕ್ರಮದಲ್ಲಿ ಹಿಂದಿ ಸಾಹಿತ್ಯದ ದಿಗ್ಗಜ ಮುನ್ಷಿ ಪ್ರೇಮ್ ಚಂದ್ ಅವರ ಕಥೆ, ಕಾದಂಬರಿ ಸೇರಿದಂತೆ ಹಿಂದಿ ಸಾಹಿತ್ಯಕ್ಕೆ ಸಂಬಂಧಿಸಿದ ಹಲವಾರು ಪುಸ್ತಕಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಿಂದಿ ವಿಭಾಗದ ಮುಖ್ಯಸ್ಥೆ ಪ್ರೊ. ಸುಮಾ ರೋಡನ್ನವರ್ ಅವರು ಭಾಗವಹಿಸಿ, ಗ್ರಂಥಾಲಯದ ಮಹತ್ವ, ಪುಸ್ತಕಗಳ ಪ್ರಾಮುಖ್ಯತೆ ಹಾಗೂ ಭಾರತದ ಪ್ರಮುಖ ಗ್ರಂಥಾಲಯಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಹಲವು ವಿಷಯಗಳನ್ನು ಹಂಚಿಕೊಂಡರು.


ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಹಿಂದಿ ಭಾಷೆಯ ಪ್ರಾಮುಖ್ಯತೆ ಹಾಗೂ ಖ್ಯಾತ ಕವಿ ಹರಿವಂಶ ರಾಯ್ ಬಚ್ಚನ್ ಅವರ ಸಾಹಿತ್ಯ ಕೊಡುಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಪರಿಷತ್ ನಿರ್ದೇಶಕ ಪ್ರೊ. ರಾಮಕೃಷ್ಣ ಬಿ.ಎಂ. ಹಾಗೂ IQAC ಸಂಯೋಜಕ ಡಾ. ಸಿದ್ದರಾಜು ಎಂ.ಎನ್. ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕರಾದ ಗ್ರಂಥಪಾಲಕಿ ಡಾ. ವನಜಾ ಅವರು ಎಲ್ಲರನ್ನೂ ಸ್ವಾಗತಿಸಿದರು. ವಿದ್ಯಾರ್ಥಿನಿ ರಯಾನಾ ಕಾರ್ಯಕ್ರಮ ನಿರೂಪಿಸಿದರು ಹಾಗೂ ಡಾ. ನಾಗರತ್ನ ಶೆಟ್ಟಿ ಅವರು ವಂದಿಸಿದರು.

ಈ ಸಂದರ್ಭದಲ್ಲಿ ಪ್ರಥಮ ಬಿ.ಎ ವಿದ್ಯಾರ್ಥಿ ಅಮಿತ್ ಶುಕ್ಲ ಹಾಗೂ ದ್ವಿತೀಯ ಬಿ.ಎ ವಿದ್ಯಾರ್ಥಿನಿ ಅಭಿರಾಮಿ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಪ್ರಥಮ ಬಿ.ಎ ವಿದ್ಯಾರ್ಥಿನಿಯರಿಂದ ಪ್ರಾರ್ಥನಾ ಗೀತೆ ನೆರವೇರಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article