ಹಾಜಬ್ಬರ ಮನೆಗೆ ಅಧಿಕಾರಿಗಳ ಭೇಟಿ
Tuesday, September 8, 2026
ಮಂಗಳೂರು: ಎಸ್‌ಐಆರ್‌ಗೆ ಸಂಬಂಧಿಸಿದಂತೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಮನೆಗೆ ಅಧಿಕಾರಿಗಳು ಮಂಗಳವಾರ ತೆರಳಿ ಲೋಪದೋಷಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ.
ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಉಳ್ಳಾಲ ತಹಶೀಲ್ದಾರ್, ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಹಿತ ಹಲವಾರು ಅಧಿಕಾರಿಗಳು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಕೂಡ ಹಾಜಬ್ಬರನ್ನು ಫೋನ್ ಮೂಲಕ ಸಂಪರ್ಕಿಸಿ ಮಾತನಾಡಿದ್ದಾರೆ ಎನ್ನಲಾಗಿದೆ.