ಶ್ರೀ ಕ್ಷೇತ್ರ ಕೇಮಾರಿಗೆ ರೂ. 1 ಕೋ. ಅನುದಾನ ಘೋಷಿಸಿದ ಮುಖ್ಯಮಂತ್ರಿ ಡಿಕೆಶಿ: ಕೃತಜ್ಞತೆ ಸಲ್ಲಿಸಿದ ಕೇಮಾರು ಶ್ರೀ
Saturday, September 19, 2026
ಮೂಡುಬಿದಿರೆ: ಶುಕ್ರವಾರ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆ ತಾಲೂಕಿನ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ರೂ.1 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಠದ ಈಶ ವಿಠ್ಠಲದಾಸ ಸ್ವಾಮೀಜಿ, ತುಳುವಿಗೆ ಪ್ರಾಶಸ್ತ್ಯ ನೀಡಿರುವುದಕ್ಕೆ ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಬಡ ಮಠಗಳನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ವಾಸ್ತವವಾಗಿ ನಮ್ಮ ಮಠಗಳೆಲ್ಲ ಗ್ರಾಮೀಣ ಪ್ರದೇಶದಲ್ಲಿರುವ ಬಡ ಮಠಗಳಾಗಿವೆ. ಇಂತಹ ಗ್ರಾಮೀಣ ಪ್ರದೇಶದ ಬಡ ಮಠಗಳನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸ್ವಾಮೀಜಿ ಹೇಳಿದ್ದಾರೆ.