ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ರೂ.10 ಕೋಟಿ ಅನುದಾನ ಬಿಡುಗಡೆಗೊಳಿಸಿ: ಆದಿದ್ರಾವಿಡ ಸಂಘದಿಂದ ಒತ್ತಾಯ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ರೂ.10 ಕೋಟಿ ಅನುದಾನ ಬಿಡುಗಡೆಗೊಳಿಸಿ: ಆದಿದ್ರಾವಿಡ ಸಂಘದಿಂದ ಒತ್ತಾಯ


ಮೂಡುಬಿದಿರೆ: ಆಲೇರಿ ಕಾನದ ಕಟದ ಮೂಲಕ್ಷೇತ್ರದ ಜೀರ್ಣೋದ್ಧಾರಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ರೂ.10 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ‘ಸಾರಮಾನಿ’ ಹೆಸರಿನಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಪ್ರತ್ಯೇಕವಾಗಿ ಗುರುತಿಸುವುದು, ಕುಲಶಾಸ್ತ್ರೀಯ ಅಧ್ಯಯನಕ್ಕೆ ಅನುದಾನ ಹಾಗೂ ಡಿಸಿ ಮನ್ನಾ ಭೂಮಿ ಹಂಚಿಕೆ ಚುರುಕುಗೊಳಿಸುವಂತೆ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮೂಡುಬಿದಿರೆ ತಾಲೂಕು ಘಟಕ ಹಾಗೂ ಆಲೇರಿ ಶ್ರೀ ಸತ್ಯ ಸಾರಮಾನಿ ಕಾನದ ಕಟದ ಮೂಲಕ್ಷೇತ್ರ ತಾಲೂಕು ಸಮಿತಿ ಒತ್ತಾಯಿಸಿದೆ.

ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. 

ಸಂಘದ ಮೂಡುಬಿದಿರೆ ತಾಲೂಕು ಘಟಕ ಅಧ್ಯಕ್ಷ ಶಿವರಾಮ್ ಮಾತನಾಡಿ, ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆದಿದ್ರಾವಿಡ ಸಮುದಾಯದ ಬೇಡಿಕೆಗಳಿಗೆ ಯಾವುದೇ ಅನುದಾನ ಅಥವಾ ಯೋಜನೆ ಘೋಷಿಸದಿರುವುದನ್ನು ಖಂಡಿಸಿದ ಅವರು ಕರಾವಳಿ ಹಾಗೂ ಮಲೆನಾಡಿಗೆ ರೂ. 32,611 ಕೋಟಿ ಅನುದಾನ ಘೋಷಿಸಿದರೂ, ಐದು ಲಕ್ಷಕ್ಕೂ ಅಧಿಕ ಜನಸಂಖ್ಯೆಯ ಆದಿದ್ರಾವಿಡ ಸಮುದಾಯಕ್ಕೆ ಯೋಜನೆ ಪ್ರಕಟಿಸದಿರುವುದು ವಿಷಾದನೀಯ ಎಂದರು.

ಸಮುದಾಯದ ಬೇಡಿಕೆಗಳ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಎರಡು ವಾರಗಳ ಕಾಲಾವಕಾಶ ಕೋರಿದ್ದಾರೆ ಎಂದು ಸಂಘ ತಿಳಿಸಿದೆ. ಗಡುವಿನೊಳಗೆ ಬೇಡಿಕೆ ಈಡೇರದಿದ್ದರೆ ಅಕ್ಟೋಬರ್‌ನಲ್ಲಿ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ.

ಆಲೇರಿ ಶ್ರೀ ಸತ್ಯ ಸಾರಮಾನಿ ಕಾನದ ಕಟದ ಮೂಲಕ್ಷೇತ್ರ ಮೂಡುಬಿದಿರೆ ತಾಲೂಕು ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಪುಚ್ಚೆಮೊಗರು ಮಾತನಾಡಿ, ಹಕ್ಕುಗಳಿಗಾಗಿ ಸಂಘಟಿತ ಹೋರಾಟ ನಡೆಸುವುದಾಗಿ ಹೇಳಿದರು. 

ಆದಿ ದ್ರಾವಿಡ ಸಂಘದ ಸುರೇಶ್ ಕೆ. ಬಿ, ಸಮಾಜ ಸೇವಕ ದಿನೇಶ ಎಂ. ಕೊಣಾಜೆ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article