ದಕ್ಷಿಣ ಕನ್ನಡ ದಸರಾ ಕ್ರೀಡಾಕೂಟದಲ್ಲಿ ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ

ದಕ್ಷಿಣ ಕನ್ನಡ ದಸರಾ ಕ್ರೀಡಾಕೂಟದಲ್ಲಿ ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ


ಮೂಡುಬಿದಿರೆ: ಮಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡ 12 ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ಪುರುಷರು ಹಾಗೂ ಮಹಿಳೆಯರ ವಿಭಾಗದ ಕಬಡ್ಡಿ, ಖೋ-ಖೋ, ಬಾಲ್ ಬ್ಯಾಡ್ಮಿಂಟನ್, ಕುಸ್ತಿ, ಅಥ್ಲೆಟಿಕ್ಸ್ ಹಾಗೂ ಯೋಗದಲ್ಲಿ ಆಳ್ವಾಸ್ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿಗಳನ್ನು ಗಳಿಸಿದೆ.

ವೈಯಕ್ತಿಕ ವಿಭಾಗದ ಅಥ್ಲೆಟಿಕ್ಸ್‌ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಒಟ್ಟು 16 ಚಿನ್ನ, 17 ಬೆಳ್ಳಿ ಹಾಗೂ 1 ಕಂಚಿನ ಪದಕಗಳನ್ನು ಪಡೆದಿದ್ದಾರೆ. ಕುಸ್ತಿಯಲ್ಲಿ 10 ಚಿನ್ನ, 10 ಬೆಳ್ಳಿ ಹಾಗೂ 5 ಕಂಚಿನ ಪದಕಗಳನ್ನು, ಯೋಗಾಸನ ಸ್ಪರ್ಧೆಯಲ್ಲಿ 5 ಚಿನ್ನ, 8 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ.

ಮೈಸೂರು ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಈ 12 ವಿಭಾಗಗಳಿಂದಲೂ ಆಳ್ವಾಸ್ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article