ಜಾನಪದ ನೃತ್ಯದಲ್ಲಿ ಹೋಲಿ ರೋಸರಿ ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
Sunday, September 20, 2026
ಮೂಡುಬಿದಿರೆ: ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಇದರ ನೇತೃತ್ವದಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
8ನೇ ತರಗತಿಯ ಸಾನ್ವಿತ, ರಕ್ಷಿತಾ, ಶರಣ್ಯ, 9ನೇ ತರಗತಿಯ ದೃತಿ ವೈಭವಿ ಸಿಂಚನ ಈ ಜನಪದ ನೃತ್ಯದಲ್ಲಿ ಉತ್ತಮವಾಗಿ ಪ್ರದರ್ಶನ ನೀಡಿದರು.
ಶಿಕ್ಷಕಿ ಡಾ. ಸಿಸಿಲಿಯಾ ಹೆಲೆನ್ ಡಿಸೋಜಾ ಅವರು ವಿದ್ಯಾರ್ಥಿಗಳಿಗೆ ನೃತ್ಯ ನಿರ್ದೇಶನ ನೀಡಿ ಮಾರ್ಗದರ್ಶನ ಮಾಡಿದ್ದರು. ಮುಂದಿನ ತಿಂಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಹೋಲಿ ರೋಸರಿ ಪ್ರೌಢಶಾಲೆ ವಿದ್ಯಾರ್ಥಿಗಳು ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.
