ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮೂಡುಬಿದಿರೆ ತಾಲೂಕಿನ ಮೂವರು ಶಿಕ್ಷಕರಿಗೆ ರಾಜ್ಯಮಟ್ಟದ ಸಮಾರಂಭದಲ್ಲಿ ಅಭಿನಂದನೆ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮೂಡುಬಿದಿರೆ ತಾಲೂಕಿನ ಮೂವರು ಶಿಕ್ಷಕರಿಗೆ ರಾಜ್ಯಮಟ್ಟದ ಸಮಾರಂಭದಲ್ಲಿ ಅಭಿನಂದನೆ


ಮೂಡುಬಿದಿರೆ: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ವತಿಯಿಂದ ಮೂಡುಬಿದಿರೆ ತಾಲೂಕಿನ 2026-27ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗುರುಶ್ರೇಷ್ಠರನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನಲ್ಲಿ ಸೆ. 27ರಂದು ನಡೆಯುವ ರಾಜ್ಯಮಟ್ಟದ ಸಮಾರಂಭದಲ್ಲಿ ಅಭಿನಂದಿಸಲಾಗುತ್ತಿದೆ ಎಂದು ಸಂಘದ ಮೂಡುಬಿದಿರೆ ತಾಲೂಕು ಅಧ್ಯಕ್ಷೆ ನಾಗರತ್ನ ಶಿರೂರು ತಿಳಿಸಿದ್ದಾರೆ.

ಪ್ರೌಢಶಾಲಾ ವಿಭಾಗದಲ್ಲಿ ಮೂಡುಮಾರ್ನಾಡು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಜಾನ್ ರೊನಾಲ್ಡ್ ಡಿಸೋಜ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪುಚ್ಚ ಮೊಗರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಕುಮಾರ ಕಾಡಿನ ಕೊಂಡ ಹಾಗೂ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪೆಂಚಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀವಾಣಿ ಅವರನ್ನು ಅಭಿನಂದಿಸಲಾಗುತ್ತಿದೆ.

ಸಮಾವೇಶದಲ್ಲಿ ಶಾಲಾ ಶಿಕ್ಷಣ ಇಲಾಖೆ ನೌಕರರ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವಿಚಾರಗಳ ಕುರಿತು ಚರ್ಚೆ ನಡೆಯಲಿದ್ದು, ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ವಿಭಾಗದ ಶಿಕ್ಷಕರು ಹಾಗೂ ನೌಕರರು ಭಾಗವಹಿಸಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article