ಮೋದೀಜಿ ಹುಟ್ಟುಹಬ್ಬ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯಿಂದ ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯಲ್ಲಿ ಆಚರಣೆ
Wednesday, September 16, 2026
ಮೂಡುಬಿದಿರೆ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ನಿಡ್ಡೋಡಿಯ ಚಾವಡಿಮನೆ ಜಗನ್ನಾಥ ಶೆಟ್ಟಿ ಅಧ್ಯಕ್ಷರಾಗಿರುವ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯು ಭಿನ್ನ ಸಾಮರ್ಥ್ಯದ ಮಕ್ಕಳೊಂದಿಗೆ ಆಚರಿಸಲು ಸಿದ್ಧತೆ ನಡೆಸಿದ್ದು ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯಲ್ಲಿ ಸೆ. 17ರಂದು ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮೂಡುಬಿದಿರೆ ಎಂ.ಸಿ.ಎಸ್.ಬ್ಯಾಂಕ್ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಶಾಲೆಯ ಸಂಸ್ಥಾಪಕ ಪ್ರಕಾಶ್ ಜೆ.ಶೆಟ್ಟಿಗಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ನಿಡ್ಡೋಡಿ ಜ್ಞಾನರತ್ನ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ ದೇವಸ್ಯ, ಬೆಳುವಾಯಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಕಂಡಿಗ ಹಾಗೂ ಬೆಳುವಾಯಿ ಗ್ರಾ.ಪಂ. ಮಾಜಿ ಅಧ್ಯಕ್ಷ ಭಾಸ್ಕರ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.