ಕೆಲಸದ ಸ್ಥಳದಲ್ಲಿ ಗೌರವ, ಸುರಕ್ಷತೆ ಪ್ರತಿಯೊಬ್ಬ ಮಹಿಳೆಯ ಹಕ್ಕು: ಮರ್ಲಿನ್ ಮಾರ್ಟಿಸ್
ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಎದುರಾಗುವ ಲೈಂಗಿಕ ಕಿರುಕುಳವನ್ನು ತಡೆಗಟ್ಟುವುದು ಕೇವಲ ಸಂಸ್ಥೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ಉದ್ಯೋಗಿಯೂ ಈ ಕುರಿತು ಅರಿವು ಹೊಂದಿರಬೇಕು. ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂದರ್ಭದಲ್ಲಿ ಭಯ ಅಥವಾ ಮುಜುಗರಕ್ಕೆ ಒಳಗಾಗದೆ, ತಕ್ಷಣವೇ ಸಂಬಂಧಪಟ್ಟವರಿಗೆ ದೂರು ನೀಡಬೇಕು. ದೂರು ನೀಡುವ ವ್ಯವಸ್ಥೆ, ಸಂತ್ರಸ್ತೆಯ ಗೌಪ್ಯತೆ ಹಾಗೂ ಆಂತರಿಕ ಸಮಿತಿಯ ಜವಾಬ್ದಾರಿಗಳ ಕುರಿತು ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಹತ್ತಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಖಾಸಗಿ ಹಾಗೂ ಸಾರ್ವಜನಿಕ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದೆ. ಈ ಸಮಿತಿಯು ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಲೈಂಗಿಕ ಕಿರುಕುಳದ ಸ್ವರೂಪ, ದೂರು ಸಲ್ಲಿಸುವ ವಿಧಾನ ಹಾಗೂ ಕಾಯ್ದೆಯಡಿ ದೊರೆಯುವ ರಕ್ಷಣೆಯ ಕುರಿತು ಉದ್ಯೋಗಿಗಳಲ್ಲಿ ನಿರಂತರ ಜಾಗೃತಿ ಮೂಡಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್ ಅಧ್ಯಕ್ಷತೆ ವಹಿಸಿದ್ದರು.
ಉಪ ಪ್ರಾಂಶುಪಾಲೆ ಜಾನ್ಸಿ ಪಿ.ಎನ್. ಉಪಸ್ಥಿತರಿದ್ದರು.
ಆಂತರಿಕ ಸಮಿತಿಯ ಸಂಚಾಲಕಿ ಡಾ. ಸುಲತಾ ಸ್ವಾಗತಿಸಿದರು. ಕಾಲೇಜಿನ ಸಿಬ್ಬಂದಿ ವಿದ್ಯಾಶ್ರೀ ಆಶಯ ಗೀತೆ ಹಾಡಿದರು. ಆಂಗ್ಲ ಭಾಷಾ ಉಪನ್ಯಾಸಕ ಲಕ್ಷ್ಮಣ್ ಕಾರ್ಯಕ್ರಮ ನಿರೂಪಿಸಿದರು.
