ನಿಡ್ಡೋಡಿ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆಯಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮುದ್ದು ಕೃಷ್ಣ ವೇಷ ಸ್ಪರ್ಧೆ

ನಿಡ್ಡೋಡಿ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮುದ್ದು ಕೃಷ್ಣ ವೇಷ ಸ್ಪರ್ಧೆ


ಮೂಡುಬಿದಿರೆ: ಜ್ಞಾನರತ್ನ ಎಜ್ಯುಕೇಶನ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತಕ್ಕೊಳಪಟ್ಟ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮೋಲ್ಲಾಸಗಳಿಂದ ಆಚರಿಸಲಾಯಿತು.


ಹಬ್ಬದ ಪ್ರಯುಕ್ತ ಪುಟಾಣಿ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಆಕರ್ಷಕ  'ಮುದ್ದು ಕೃಷ್ಣ ವೇಷ ಸ್ಪರ್ಧೆ'ಯನ್ನು ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ (Academic Advisor)  ಮಲ್ಲಿಕಾ ಹರೀಶ್ ಅವರು ಜ್ಯೋತಿ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿ, ಮಕ್ಕಳಿಗೆ ಶುಭ ಹಾರೈಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷರಾದ  ಪಾವನಾ ಹಾಗೂ ಸಂಸ್ಥೆಯ ಆಡಳಿತಾಧಿಕಾರಿ  ಸಾಗರ್ ಗೌರವಾನ್ವಿತ ಉಪಸ್ಥಿತರಿದ್ದರು.

​ಸ್ಪರ್ಧೆಯಲ್ಲಿ ಕಣ್ಮನ ಸೆಳೆಯುವಂತೆ ಬಾಲಕೃಷ್ಣ ವೇಷ ಧರಿಸಿ ಮಿಂಚಿದ ಪುಟ್ಟ ಕಂದಮ್ಮಗಳಿಗೆ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮನಸೂರೆಗೊಳ್ಳುವ ಸಾಂಸ್ಕೃತಿಕ ವೈಭವ ಅನಾವರಣಗೊಂಡು, ಗೋಕುಲಾಷ್ಟಮಿಯ ಕಳೆಗಟ್ಟಿದ ಸಂಭ್ರಮಕ್ಕೆ ಸಾಕ್ಷಿಯಾಯಿತು.

​ಸಹ ಮುಖ್ಯೋಪಾಧ್ಯಾಯಿನಿ ಜಯಶ್ರೀ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article