ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ “ವಿದ್ಯಾರ್ಥಿ ಜೀವನ ಹಾಗೂ ನೈತಿಕತೆ” ಕುರಿತು ವಿಶೇಷ ಉಪನ್ಯಾಸ
ವಿದ್ಯಾರ್ಥಿ ಜೀವನವು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳುವ ಸುಂದರ ಅವಕಾಶವಾಗಿದೆ. ಜ್ಞಾನಾರ್ಜನೆಯ ಜೊತೆಗೆ ನೈತಿಕತೆ, ಮಾನವೀಯತೆ, ಶಿಸ್ತು ಹಾಗೂ ಜವಾಬ್ದಾರಿಯಂತಹ ಗುಣಗಳನ್ನು ಬೆಳೆಸಿಕೊಳ್ಳುವುದು ಅಗತ್ಯ. ಕಲಿಕೆಯ ಪ್ರಕ್ರಿಯೆ ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗಿರದೆ, ಜೀವನಾನುಭವಗಳ ಮೂಲಕವೂ ನಡೆಯುತ್ತದೆ. ಜೀವನದಲ್ಲಿ ಎದುರಾಗುವ ಅನುಭವಗಳು ವ್ಯಕ್ತಿಯ ಚಿಂತನೆ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹಾಗೂ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.
ನೈತಿಕತೆ ವ್ಯಕ್ತಿಯ ಬದುಕಿಗೆ ಅರ್ಥವನ್ನು ನೀಡುವುದರ ಜೊತೆಗೆ, ಸಮಾಜದಲ್ಲಿ ಆತನಿಗೆ ಗೌರವ ಹಾಗೂ ವಿಶ್ವಾಸವನ್ನು ತಂದುಕೊಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಅವಧಿಯಲ್ಲಿಯೇ ಪ್ರಾಮಾಣಿಕತೆ, ಜವಾಬ್ದಾರಿ, ಸಹಾನುಭೂತಿ, ಶಿಸ್ತು ಹಾಗೂ ಪರಸ್ಪರ ಗೌರವದಂತಹ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪಪ್ರಾಂಶುಪಾಲೆ ಜಾನ್ಸಿ ಪಿ. ಎನ್, ಶಿಕ್ಷಣವು ಕೇವಲ ಅಂಕಗಳನ್ನು ಗಳಿಸುವುದಕ್ಕೆ ಸೀಮಿತವಾಗದೆ, ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಸಾಧನವಾಗಬೇಕು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿಕೊಂಡು, ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ., ಸಂಸ್ಕೃತ ವಿಭಾಗದ ಮುಖ್ಯಸ್ಥ ಅಂಬರೀಷ್ ಚಿಪ್ಳೂಣಕರ್ ಉಪಸ್ಥಿತರಿದ್ದರು.
ಅಕ್ಷಯ್ ಸಿದ್ದಪ್ಪ ಸ್ವಾಗತಿಸಿದರು. ಲಿಖಿತಾ ಕಾರ‍್ಯಕ್ರಮ ನಿರೂಪಿಸಿದರು. ದೀಕ್ಷಿತಾ ವಂದಿಸಿದರು.
