ವಿದ್ಯಾಭಾರತಿ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
Tuesday, September 29, 2026
ಪುತ್ತೂರು: ಜೈ ಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಎಚ್. ಮನ್ಮಿತಾ, ಆತ್ಮಿಕಾ, ಶರಣ್ಯ ಎಚ್.ಎನ್. ಹಾಗೂ ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ಕೆ.ವಿ. ನಿಖಿಲ್ ಕುಮಾರ್ ದ್ವಿತೀಯ ಪಿಯುಸಿಯ ಅಭಿಲಾಷ್ ಬಿ. ಭಾಗವಹಿಸಿದ್ದರು.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಅವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
