ವೈಟ್ ಲಿಫ್ಟಿಂಗ್: ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ
Wednesday, September 30, 2026
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಬದ್ರಿಯಾ ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ ೧೫ ರಂದು ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ‘ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ 2026-27’ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.
ಬಾಲಕಿಯರ ವಿಭಾಗದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಎನ್. ವಿಜೇತ ಕುಲಾಲ್ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಅಕ್ಷರ ಎಂ.ಎಸ್. ಬೆಳ್ಳಿ ಮತ್ತು ಪ್ರಥಮ ವಾಣಿಜ್ಯ ವಿಭಾಗದ ನಿಷಿತಾ ಕಂಚಿನ ಪದಕವನ್ನು, ಬಾಲಕರ ವಿಭಾಗದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸುಹಾನ್ ರೈ ಜೆ. ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಕಿಶನ್ ಪಿ.ಜೆ. ಬೆಳ್ಳಿಯ ಪದಕ ಮತ್ತು ದ್ವಿತೀಯ ವಿಜ್ಞಾನ ವಿಭಾಗದ ಮನೋಜ್ ಜಿ.ಬಿ. ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರಿಗೆ ಅಶ್ವತ್ ಕೆ.ಎಸ್. ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.