ಸಂತ ಫಿಲೋಮಿನಾ ಕಾಲೇಜಿನಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮ


ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಪರ್ಲಡ್ಕದ ಫಾ. ಪತ್ರಾವೋ ಡಿ-ಅಡಿಕ್ಷನ್ ಸೆಂಟರ್ ಸಹಯೋಗದಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಫಾ. ಪತ್ರಾವೋ ಡಿ-ಅಡಿಕ್ಷನ್ ಸೆಂಟರ್ನ ಆಪ್ತಸಮಾಲೋಚಕಿ ಜೀಟಾ ಅವರು ಮಾದಕ ವಸ್ತುಗಳ ದುರ್ಬಳಕೆಯ ಅಪಾಯಗಳು, ಅದರ ತಡೆಗಟ್ಟುವಿಕೆಯ ಮಹತ್ವ ಹಾಗೂ ಯುವಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯತೆಯ ಕುರಿತು ಮಾತನಾಡಿದರು. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.


ಫಾ. ಪತ್ರಾವೋ ಡಿ-ಅಡಿಕ್ಷನ್ ಸೆಂಟರ್ನ ಸಿಐಪಿ ಯೋಜನೆಯ ಸಂಯೋಜಕಿ ಸಿಸ್ಟರ್ ಜಾನೆಟ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಾದಕ ವ್ಯಸನಮುಕ್ತ ಜೀವನವನ್ನು ನಡೆಸುವುದರೊಂದಿಗೆ ತಮ್ಮ ಸುತ್ತಮುತ್ತಲಿನ ಸಮುದಾಯದಲ್ಲಿಯೂ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ಮಾತನಾಡಿ, ಮಾದಕ ವ್ಯಸನದಂತಹ ಸಾಮಾಜಿಕ ಸಮಸ್ಯೆಗಳ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಕಾಲೇಜು ಮತ್ತು ಡಿ-ಅಡಿಕ್ಷನ್ ಸೆಂಟರ್ ಕೈಗೊಂಡಿರುವ ಸಹಯೋಗದ ಪ್ರಯತ್ನವನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಸಕ್ರಿಯ ಹೊಣೆಗಾರಿಕೆಯನ್ನು ವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಂಎಸ್‌ಡಬ್ಲು ಸಂಯೋಜಕಿ ಶ್ರೀಮಣಿ ಉಪಸ್ಥಿತರಿದ್ದರು.

ಎಂ.ಎಸ್ಸಿ. ಗಣಿತಶಾಸ್ತ್ರದ ವಿದ್ಯಾರ್ಥಿನಿ ಸೌಪರ್ಣಿಕಾ ಹಾಗೂ ತಂಡದವರು ಪ್ರಾರ್ಥನೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಂಎಸ್‌ಡಬ್ಲ್ಯು ವಿದ್ಯಾರ್ಥಿನಿ ಕನೀಝ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಬೋಧಕ ವರ್ಗದವರು ಸಕ್ರಿಯವಾಗಿ ಪಾಲ್ಗೊಂಡರು. ಮಾದಕ ವ್ಯಸನದ ಅಪಾಯಗಳ ಕುರಿತು ಶೈಕ್ಷಣಿಕ ಸಮುದಾಯದಲ್ಲಿ ಅರಿವು ಮೂಡಿಸುವುದರ ಜೊತೆಗೆ, ಆರೋಗ್ಯಕರ ಹಾಗೂ ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣದ ಹೊಣೆಗಾರಿಕೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ಮಹತ್ವದ ಹೆಜ್ಜೆಯಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article