ಜಿಮ್ ವರ್ಕೌಟ್ ವಿದ್ಯಾರ್ಥಿ ಸಾವು
Saturday, September 5, 2026
ಪುತ್ತೂರು: ಜಿಮ್ ನಲ್ಲಿ ವ್ಯಾಯಾಮ ನಡೆಸುತ್ತಿದ್ದ ಸಂದರ್ಭ ಉಸಿರುಕಟ್ಟಿ ಅಸ್ವಸ್ಥನಾದ ವಿದ್ಯಾರ್ಥಿ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಶನಿವಾರ ಸಂಜೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಕುಂಜೂರುಪಂಜ ನಿವಾಸಿ ರಮೇಶ್ ರೈ ಅವರ ಪುತ್ರ ಶ್ರಮಿಕ್ (20) ಎಂದು ತಿಳಿದುಬಂದಿದೆ.
ನೆಹರುನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವಿದ್ಯಾರ್ಥಿಯಾಗಿರುವ ಶ್ರಮಿಕ್ ಬೊಳುವಾರಿನ ಜಿಮ್ ಸೆಂಟರಿನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭ ಉಸಿರುಕಟ್ಟಿದಂತಾಗಿ ಅಸ್ವಸ್ಥರಾದರು. ತಕ್ಷಣ ಅವರನ್ನು ಬೊಳುವಾರು ಖಾಸಗಿ ಆಸ್ಪತ್ರೆಗೆ ಸಾಗಿಸಲಾದರೂ ಆತ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.