ವಿಶ್ವವಿದ್ಯಾಲಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ನಿಶ್ವಿತಾಗೆ ಬೆಳ್ಳಿ

ವಿಶ್ವವಿದ್ಯಾಲಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ನಿಶ್ವಿತಾಗೆ ಬೆಳ್ಳಿ


ಪುತ್ತೂರು: ಉಡುಪಿಯ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಒಳಾಂಗಣ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ ೫ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ್ಕಾಲೇಜು ಪುರುಷರ ಹಾಗೂ ಮಹಿಳೆಯರ ಕರಾಟೆ ಚಾಂಪಿಯನ್ಶಿಪ್ 2026-27 ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿನಿ ನಿಶ್ವಿತಾ ಗಮನಾರ್ಹ ಸಾಧನೆ ಮಾಡಿದ್ದಾರೆ.

ಚಾಂಪಿಯನ್‌ಶಿಪ್‌ನಲ್ಲಿ ಸಂತ ಫಿಲೋಮಿನಾ ಕಾಲೇಜು ನಾಲ್ವರು ವಿದ್ಯಾರ್ಥಿಗಳ ತಂಡದೊಂದಿಗೆ ಭಾಗವಹಿಸಿ,ತಂಡದಲ್ಲಿ ಒಬ್ಬ ಪುರುಷ ಹಾಗೂ ಮೂವರು ಮಹಿಳಾ ವಿದ್ಯಾರ್ಥಿಗಳು ಇದ್ದು, ಕಾಲೇಜಿನ ಪ್ರಥಮ ವರ್ಷದ ಬಿ.ಎಸ್ಸಿ. ವಿದ್ಯಾರ್ಥಿನಿ ನಿಶ್ವಿತಾ ಅವರು ಮಹಿಳೆಯರ -68 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು. ಅತ್ಯುತ್ತಮ ಕೌಶಲ್ಯ, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವದಿಂದ ಪ್ರದರ್ಶನ ನೀಡಿದ ಅವರು ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.

ನಿಶ್ವಿತಾ ಅವರ ಸಾಧನೆಗೆ ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾದ ವ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಅಭಿನಂದನೆ ಸಲ್ಲಿಸಿ, ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳ ಪ್ರಯತ್ನವನ್ನು ಶ್ಲಾಘಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article