ಫುಟ್ಬಾಲ್ ಪಂದ್ಯಾಟ: ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
Wednesday, September 9, 2026
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ. ಜಿಲ್ಲೆ ಇದರ ಆಶ್ರಯದಲ್ಲಿ ಸೆ.8 ರಂದು ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ.ಪೂ ಕಾಲೇಜಿನ ಬಾಲಕರ ವಿಭಾಗವು ಪ್ರಥಮ ಸ್ಥಾನ ಪಡೆದು ಸೆ.26 ರಂದು ಉಳ್ಳಾಲ ಮದನಿ ಪ.ಪೂ. ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.