ಮಾನವನ ಆರೋಗ್ಯಕ್ಕೆ ಸವಾಲೊಡ್ಡುವ ಶೇ.80 ಕಾಯಿಲೆಗಳಿಗೆ  ಭಾರತೀಯ ವೈದ್ಯಕೀಯ ಪದ್ದತಿಯಲ್ಲಿ ಶಾಶ್ವತ ಪರಿಹಾರ: ಡಾ. ಅಪರ್ಣಾ ಸುರೇಂದ್ರ

ಮಾನವನ ಆರೋಗ್ಯಕ್ಕೆ ಸವಾಲೊಡ್ಡುವ ಶೇ.80 ಕಾಯಿಲೆಗಳಿಗೆ ಭಾರತೀಯ ವೈದ್ಯಕೀಯ ಪದ್ದತಿಯಲ್ಲಿ ಶಾಶ್ವತ ಪರಿಹಾರ: ಡಾ. ಅಪರ್ಣಾ ಸುರೇಂದ್ರ


ಶಿರ್ವ: ಮಾನವನ ಆರೋಗ್ಯಕ್ಕೆ ಸವಾಲೊಡ್ಡುವ ಶೇ.80 ಕಾಯಿಲೆಗಳಿಗೆ ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸೆಯಂತಹ ಐದು ಸಾವಿರ ವರ್ಷಗಳ ಇತಿಹಾಸ ಇರುವ ಭಾರತೀಯ ವೈದ್ಯಕೀಯ ಪದ್ದತಿಯಲ್ಲಿ ಶಾಶ್ವತ ಪರಿಹಾರ ಇದೆ ಎಂದು ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜು ಮಣಿಪಾಲ ಇದರ ಪ್ರಾಂಶುಪಾಲೆ ಡಾ. ಅಪರ್ಣಾ ಸುರೇಂದ್ರ ಹೇಳಿದರು.

ಅವರು ಶಂಕರಪುರ ಸಮಿಪದ ಸಾಲ್ಮರದಲ್ಲಿರುವ ಕೃಷ್ಣವೇಣಿ ಆಯುರ್ವೇದ ಚಿಕಿತ್ಸಾ ಮತ್ತು ಸ್ವಾಸ್ಥ್ಯ ಕೇಂದ್ರದಲ್ಲಿ ನಾಗರಿಕ ಸೇವಾ ಸಮಿತಿ ಬಂಟಕಲ್ಲು ಮತ್ತು ಲಯನ್ಸ್ ಕ್ಲಬ್ ಜಾಸ್ಮಿನ್ ಬಂಟಕಲ್ಲು ಇದರ ಸಹಭಾಗಿತ್ವದಲ್ಲಿ ಭಾನುವಾರ ಆಯೋಜಿಸಿದ್ದ ‘ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದರು.

ರೋಗ ಬಾರದಂತೆ ತಡೆಯಲು, ಬಂದ ರೋಗವನ್ನು ಗುಣಪಡಿಸಲು, ಮತ್ತು ಆರೋಗ್ಯ ವರ್ಧನೆಗೆ ಪೂರಕವಾದ ಭಾರತೀಯ ವೈದ್ಯಕೀಯ ಪದ್ದತಿಯನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕೃಷ್ಣವೇಣಿ ಆಯುರ್ವೇದ ಚಿಕಿತ್ಸಾ ಮತ್ತು ಸ್ವಾಸ್ಥ್ಯ ಕೇಂದ್ರವು ಸ್ಥಳೀಯ ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ  ಕಂಕಣಬದ್ಧವಾಗಿ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ಶಂಕರಪುರ ಇದರ ಟ್ರಸ್ಟಿಗಳಾದ ಹರಿದಾಸ್ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಎರಡು ವರ್ಷಗಳಿಂದ ನಮ್ಮ ಟ್ರಸ್ಟ್ ಸಾರ್ವಜನಿಕರ ಆರೋಗ್ಯ ರಕ್ಷಣೆಯ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿನ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಕರೆಯಿತ್ತರು.

ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಲಕ್ಷ್ಮೀಶ ಉಪಾಧ್ಯ ಚಿಕಿತ್ಸಾಲಯದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಉಪಾಧ್ಯಕ್ಷ ಮಾಧವ ಕಾಮತ್, ಲಯನ್ಸ್ ಬಂಟಕಲ್ಲು ಜಾಸ್ಮಿನ ಉಪಾಧ್ಯಕ್ಷೆ  ಅಸುಂತಾ ಡಿಸೋಜ, ಶುಭಹಾರೈಸಿದರು. 

ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಡಾ.ರಮೇಶ್ ಮಿತ್ತಾಂತಾಯ ಸ್ವಾಗತಿಸಿದರು. ನಾಗವೇಣಿ ವಂದಿಸಿ, ಜ್ಯೋತಿ ಕೆ.ವಿ. ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article