ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿವಾದಿತ ಜಾಗಗಳ ಪ್ರಕರಣ ಸುಖಾಂತ್ಯ: ದೇವಾಲಯದಿಂದ ಕಟ್ಟಡಗಳ ತೆರವು ಆರಂಭ
Wednesday, September 30, 2026
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿರುವ ಕೆಲ ಜಾಗಗಳ ವಿವಾದ ಪ್ರಕರಣಕ್ಕೆ ಸಂಬಂಧಿಸಿ ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಇಲ್ಲಿರುವ ಕೆಲ ಅಂಗಡಿ, ಮನೆ, ಕಟ್ಟಡಗಳ ತೆರವಿಗೆ ಸೆ.30 ರಂದು ಚಾಲನೆ ನೀಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿರುವ ಶ್ರೀನಿಕೇತನ ಕಟ್ಟಡ, ಆದಿ ಸುಬ್ರಹ್ಮಣ್ಯದಲ್ಲಿರುವ ಕೆಲ ಖಾಸಗಿ ಭೂಮಿ, ಕುಮಾರಧಾರದಲ್ಲಿನ ಖಾಸಗಿ ಭೂಮಿಗೆ ಸಂಬಂಧಿಸಿದ ವ್ಯಾಜ್ಯ ಸುಪ್ರೀಂ ಕೋರ್ಟ್‌ನ ತೀರ್ಪಿನ ಬಳಿಕವು ಕಟ್ಟಡ ತೆರವಿಗೆ ಕ್ರಮ ಕೈಗೊಳ್ಳಲಾಗಿರಲಿಲ್ಲ. ಇತ್ತೀಚೆಗೆ ಕರ್ನಾಟಕ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕಟಾರಿಯಾ ದೇವಾಲಯದ ಭೇಟಿ ಬಳಿಕ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗಿದ್ದು, ಹಂತ ಹಂತವಾಗಿ ತೆರವು ಕಾರ್ಯಾಚರಣೆ ನಡೆಯಲಿರುವುದಾಗಿ ತಿಳಿದು ಬಂದಿದೆ.