ನಿನ್ನಿಕಲ್ಲು 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ವಿಳಂಬ ಕುರಿತು ಚರ್ಚೆ

ನಿನ್ನಿಕಲ್ಲು 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ವಿಳಂಬ ಕುರಿತು ಚರ್ಚೆ

ಉಜಿರೆ: ಉಜಿರೆಯ ಸಮೀಪದ ನಿನ್ನಿ ಕಲ್ಲಿನಲ್ಲಿ ನಿರ್ಮಾಣಗೊಳ್ಳುತ್ತಿರುವ 110 ಕೆವಿ ವಿದ್ಯುತ್ ಸಬ್‌ಸ್ಟೇಷನ್ ಕಾಮಗಾರಿ ವಿಳಂಬವಾಗುತ್ತಿರುವ ಕುರಿತು ಬುಧವಾರ ನಡೆದ ಉಜಿರೆ ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಚರ್ಚೆ ನಡೆಯಿತು.

ಬಂಟ್ವಾಳ ಸಂತೋಷ್ ನಾಯಕ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಬ್ ಸ್ಟೇಷನ್ ಕಾಮಗಾರಿಯ ಪ್ರಗತಿ ಹಾಗೂ ವಿಳಂಬಕ್ಕೆ ಕಾರಣಗಳ ಕುರಿತು ಗ್ರಾಹಕರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈಗಾಗಲೇ ಸಬ್ ಸ್ಟೇಷನ್‌ಗೆ ಸಂಬಂಧಿಸಿದಂತೆ ಟವರ್‌ಗಳು ಹಾಗೂ ವಿದ್ಯುತ್ ಕಂಬಗಳನ್ನು ಸ್ಥಾಪಿಸುವ ಬಹುತೇಕ ಕೆಲಸ ಪೂರ್ಣಗೊಂಡಿದೆ. ಆದರೆ ವಿದ್ಯುತ್ ತಂತಿ ಎಳೆಯುವ ಹಾಗೂ ಸಬ್‌ಸ್ಟೇಷನ್‌ನ ಉಳಿದ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯಿಂದ ಅಗತ್ಯ ಅನುಮತಿ ದೊರೆಯದಿರುವುದರಿಂದ ಕಾಮಗಾರಿ ಮುಂದುವರಿಸಲು ತೊಡಕು ಉಂಟಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article