ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ
Tuesday, September 1, 2026
ಉಜಿರೆ: ಅಳದಂಗಡಿ ವಲಯದ ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಎಂಬಲ್ಲಿ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ಅಲ್ಲಿಯ ನಿವಾಸಿ ಬಾಲಕೃಷ್ಣ ನಾಯ್ಕ ಅವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನ್ ಇಟ್ಟಿದ್ದರು. ಚಿರತೆಯೊಂದು ಸೆ.1 ರಂದು ಬೆಳಗ್ಗೆ ಬೋನಿಗೆ ಬಿದ್ದಿದೆ. ಚಿರತೆಯನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸಲಿದೆ.