ಅಪ್ರಾಪ್ತ ಬಾಲಕಿಗೆ ಮಗು: ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಗೆ ಮಗು: ಪ್ರಕರಣ ದಾಖಲು

ವಿಟ್ಲ: ಕೇರಳ-ಕರ್ನಾಟಕ ಗಡಿಭಾಗದಲ್ಲಿ ಒಂದೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಪ್ರೇಮಿಗಳ ನಡುವಿನ ಎಡವಟ್ಟಿನಿಂದಾಗಿ, ಅಪ್ರಾಪ್ತ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಶೂನ್ಯ ಅಕ್ಷರ ಕ್ರಮಾಂಕ ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ:

ಸಂತ್ರಸ್ತ ಅಪ್ರಾಪ್ತ ಬಾಲಕಿಗೆ ಕೇರಳ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಅಪ್ರಾಪ್ತ ಬಾಲಕನೊಬ್ಬನ ಪರಿಚಯವಿದ್ದು, ಇಬ್ಬರೂ ಮೊಬೈಲ್ ಮೂಲಕ ನಿರಂತರ ಸಂಪರ್ಕದಲ್ಲಿದ್ದರು.

ಕಳೆದ 2025ರ ಡಿಸೆಂಬರ್ 21ರಂದು ಬಾಲಕನು ಸಂತ್ರಸ್ತೆಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದನೆನ್ನಲಾಗಿದೆ. ಇತ್ತೀಚೆಗೆ ಸೆ.8 ರಂದು ನೊಂದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಮರುದಿನ ಬಾಲಕಿಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಶೂನ್ಯ ಅಕ್ಷರ ಕ್ರಮಾಂಕ 01/2026 ರಡಿ, ಪೋಕ್ಸೋ ಕಾಯ್ದೆ 2012 ಹಾಗೂ ಬಿಎನ್‌ಎಸ್ 2023 ರ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇರೆಗೆ ಮುಂದಿನ ಕಾನೂನು ಕ್ರಮಕ್ಕಾಗಿ ಸಂಬಂಧಿಸಿದ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article