ಅಲೇರಿ ಮೂಲಸ್ಥಾನ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ, ಡಿ.ಸಿ.ಮನ್ನಾ ಜಮೀನು ನೀಡಲು ಮಹತ್ತರ ತೀರ್ಮಾನ: ಬಿ. ರಮಾನಾಥ ರೈ

ಅಲೇರಿ ಮೂಲಸ್ಥಾನ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ, ಡಿ.ಸಿ.ಮನ್ನಾ ಜಮೀನು ನೀಡಲು ಮಹತ್ತರ ತೀರ್ಮಾನ: ಬಿ. ರಮಾನಾಥ ರೈ


ಬಂಟ್ವಾಳ: ಪ್ರಸಕ್ತ ರಾಜ್ಯ ಸರಕಾರವು ಪರಿಶಿಷ್ಟ ಸಮುದಾಯದ ಅಲೇರಿ ಮೂಲಸ್ಥಾನ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನದ ಜೊತೆಗೆ ಅರ್ಹ ಫಲಾನುಭವಿಗಳಿಗೆ ಡಿ.ಸಿ.ಮನ್ನಾ ಜಮೀನು ನೀಡಲು ಮಹತ್ತರ ತೀರ್ಮಾನ ಕೈಗೊಂಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಬಂಟ್ವಾಳ ತಲೂಕಿನ ನರಿಕೊಂಬು ಗ್ರಾಮದ ನಿನ್ನಿಪಡ್ಪು ಪರಿಶಿಷ್ಟ ಕಾಲೊನಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಸಹಭಾಗಿತ್ವದಲ್ಲಿ ಶುಕ್ರವಾರ ನಡೆದ ‘ಸ್ವಚ್ಛತಾ ಆಂದೋಲನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ತನ್ನ ಆದರ್ಶ ಜೀವನದಿಂದಲೇ ಜಗತ್ತಿನಲ್ಲಿ ಭಾರತಕ್ಕೆ ಗೌರವ ತಂದು ಕೊಟ್ಟ ಶ್ರೇಷ್ಠ ನಾಯಕರು ಎಂದು ಹೇಳಿದರು.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅಧ್ಯಕ್ಷ ಮಹಮ್ಮದ್ ಆಲಿ ಪುತ್ತೂರು ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲ್ಲಿನ ಗಾಂಧಿ ಜಯಂತಿ ಆಚರಣೆಯು ಗಾಂಧೀಜಿ ಅವರ ಸಂದೇಶಕ್ಕೆ ಪೂರಕ ಮತ್ತು ಅರ್ಥಪೂರ್ಣವಾಗಿ ನಡೆದಿದೆ ಎಂದರು.

ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಬೂಡ ಬೇಬಿ ಕುಂದರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ತಾ.ಪಂ. ಮಾಜಿ ಅಧ್ಯಕ್ಷ ಕೆ. ಪದ್ಮನಾಭ ರೈ, ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಹಿಳಾ ಕಾಂಗ್ರೆಸ್

ಘಟಕ ಅಧ್ಯಕ್ಷೆ ಐಡಾ ಸುರೇಶ್, ಜಿಲ್ಲಾ ಮುಖಂಡ ಚಿತ್ತರಂಜನ್ ಶೆಟ್ಟಿ ಮಾತನಾಡಿದರು.

ನಿನ್ನಿಪಡ್ಪು ದೈವಸ್ಥಾನ ಸಮಿತಿ ಅಧ್ಯಕ್ಷ ಮೋನಪ್ಪ ನಿನ್ನಿಪಡ್ಪು, ಪ್ರಮುಖರಾದ ಮಹಮ್ಮದ್ ನಂದಾವರ, ಆಲ್ಫೋನ್ಸ್ ಮಿನೆಜಸ್, ಆಲ್ಬಟರ್? ಮಿನೆಜಸ್, ಆನಂದ ಸಾಲ್ಯಾನ್, ಉಮೇಶ್ ನೆಲ್ಲಿಗುಡ್ಡೆ, ರವೀಂದ್ರ ಸಪಲ್ಯ, ಪ್ರಸಾದ್ ಗಾಣಿಗ, ಸಿರಾಜ್ ಮದಕ, ಅಬ್ದುಲ್ ರಝಾಕ್ ಕೊಳ್ನಾಡು, ಇಕ್ಬಾಲ್, ಸಮದ್ ಕೈಕಂಬ, ಮೋಹನ್ ಚೆಂಡ್ತಿಮಾರ್ ಮತ್ತಿತರರು ಭಾಗವಹಿಸಿದ್ದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು ಸ್ವಾಗತಿಸಿ, ಪ್ರಸ್ತಾವನೆಗೈದರು. ಪಾಣೆಮಂಗಳೂರು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಎ. ಬಿ. ಅಬ್ದುಲ್ಲಾ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article