ಮಾದಕ ವಸ್ತು ಸೇವಿಸಿದಾತನ ಬಂಧನ
Saturday, October 10, 2026
ಬಂಟ್ವಾಳ: ಫರಂಗಿಪೇಟೆ ಸಮೀಪದ ಕುಂಪಣಮಜಲು ಎಂಬಲ್ಲಿ ಮಾದಕ ವಸ್ತು ಸೇವಿಸಿ ನಶೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಪುದು ಗ್ರಾಮದ ನಿವಾಸಿ ಮುಹಮ್ಮದ್ ಮುಸ್ತಫಾ ಬಂಧಿತ ಆರೋಪಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದಾಗ ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದ.
ತಕ್ಷಣ ಪೊಲೀಸರು ಅತನನ್ನು ಹಿಡಿದು ವಿಚಾರಿಸಿ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.