ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆರೋಪ: ಜಿಲ್ಲಾಧಿಕಾರಿಗೆ ಬಿಜೆಪಿ ಬಿಎಲ್‌ಎ ದೂರು

ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆರೋಪ: ಜಿಲ್ಲಾಧಿಕಾರಿಗೆ ಬಿಜೆಪಿ ಬಿಎಲ್‌ಎ ದೂರು

ಬಂಟ್ವಾಳ: ಕೇರಳ ಮತ್ತು ಕರ್ನಾಟಕದ ಮತದಾರರ ಪಟ್ಟಿಗಳಲ್ಲಿ ಒಂದೇ ವ್ಯಕ್ತಿಯ ಹೆಸರು ನೋಂದಣಿಯಾಗಿದೆಯೆಂದು ಆರೋಪಿಸಿ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ವಿಳಾಸದ ಪುರಾವೆಯಾಗಿ ಸಲ್ಲಿಸಲಾಗುತ್ತಿರುವ ದಾಖಲೆಗಳ ನೈಜತೆಯನ್ನು ಪರಿಶೀಲಿಸುವಂತೆ ಆಗ್ರಹಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಬೂತ್ ಮಟ್ಟದ ಏಜೆಂಟ್ (ಬಿಎಲ್‌ಎ-1) ಸುದರ್ಶನ್ ಬಜ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಸಾಲೆತ್ತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಶರೀಫ್ ಎಂ. ಅವರ ಹೆಸರು ಪಕ್ಕದ ಕೇರಳರಾಜ್ಯದ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹಾಗೂ ಕರ್ನಾಟಕ ರಾಜ್ಯದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದಾಖಲಾಗಿರುವುದು  ಪರಿಶೀಲನೆ ವೇಳೆ ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

2026ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಅವರು ಮಂಜೇಶ್ವರ ಕ್ಷೇತ್ರದಲ್ಲಿ ಮತ ಚಲಾಯಿಸಿದ್ದು, ಕರ್ನಾಟಕದ ಮತದಾರರ ಪಟ್ಟಿಯಲ್ಲೂ ಹೆಸರು ಮುಂದುವರಿದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದ್ದು, ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ಆರೋಪ ಸಾಬೀತಾದಲ್ಲಿ ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಇದೇ ವೇಳೆ ಮತದಾರರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ನೋಟಿಸ್ ಪಡೆದ ಕೆಲವು ವ್ಯಕ್ತಿಗಳು ಹಳೇ  ಆಧಾರ್ ಕಾರ್ಡ್‌ಗಳನ್ನು ವಿಳಾಸದ ಪುರಾವೆಯಾಗಿ ಸಲ್ಲಿಸುತ್ತಿದ್ದಾರೆ. ಕೆಲವರು ಪ್ರಸ್ತುತ ವಿಳಾಸದಲ್ಲಿ ವಾಸವಿಲ್ಲದಿದ್ದರೂ, ದಾಖಲೆಗಳಲ್ಲಿನ ಮನೆ ಸಂಖ್ಯೆಗಳು ಬೇರೆಯವರ ಹೆಸರಿನಲ್ಲಿವೆ ಎಂಬ ಅಂಶವನ್ನು ಸುದರ್ಶನ್ ಬಜ ಅವರು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ  ತಿಳಿಸಿದ್ದಾರೆ.

ಸಲ್ಲಿಸಲಾದ ಆಧಾರ್ ದಾಖಲೆಗಳು ಹಾಗೂ ಅಗತ್ಯವಿರುವಲ್ಲಿ ಪ್ರಸ್ತುತ ಇ-ಆಧಾರ್ ದಾಖಲೆಗಳನ್ನು ಪರಿಶೀಲಿಸಿ, ವಿಳಾಸದ ನೈಜತೆಯನ್ನು ಖಚಿತಪಡಿಸಿಕೊಳ್ಳಬೇಕು. ಸುಳ್ಳು ದಾಖಲೆ ಸಲ್ಲಿಸಿರುವುದು ದೃಢಪಟ್ಟಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article