ತಲೆ ಮರೆಸಿಕೊಂಡಿದ್ದ ಆರೋಪಿ ಸೆರೆ
Saturday, October 24, 2026
ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿಯಾಗಿದ್ದಾನೆ. ಈತ ಕೋರ್ಟಿಗೆ ಹಾಜರಾಗದ ಹಿನ್ನಲೆಯಲ್ಲಿ ವಾರಂಟ್ ಹೊರಡಿಸಲಾಗಿತ್ತು.ಇದೀಗ ಅತನ ಇರುವಿಕೆಯನ್ನು ಪತ್ತೆಹಚ್ಚಿದ ಬಂಟ್ವಾಳ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.