ಮೈಸೂರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ: ಬೆಳ್ತಂಗಡಿಯ ಯುವಕ ಮೃತ್ಯು

ಮೈಸೂರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ: ಬೆಳ್ತಂಗಡಿಯ ಯುವಕ ಮೃತ್ಯು

ಬೆಳ್ತಂಗಡಿ: ಮೈಸೂರು ದಸರಾ ವೀಕ್ಷಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಬೈಕ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕೊಳಂಬೆಯ ಯುವಕ ಮೃತಪಟ್ಟ ಘಟನೆ ಅ.೧೮ ರಂದು ಮಧ್ಯರಾತ್ರಿ ನಡೆದಿದೆ.

ಕೊಳಂಬೆ ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಮನೋಹರ (23) ಮೃತ ಯುವಕ. 

ಸಹಸವಾರ ಕೊಯ್ಯರಿನ ಬಿರ್ಕೆ ನಿವಾಸಿ ದೀಕ್ಷಿತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಮನೋಹರ ಹಾಗೂ ದೀಕ್ಷಿತ್ ಅ.೧೮ ರಂದು ಮೈಸೂರು ದಸರಾ ವೀಕ್ಷಿಸಲು ಬೈಕ್‌ನಲ್ಲಿ ತೆರಳಿದ್ದರು. ರಾತ್ರಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಸಿದ್ದಾರ್ಥನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಬೈಕ್’ಗೆ ಸ್ಕೂಟಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮನೋಹರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇಮೃತಪಟ್ಟಿದ್ದು, ಹಿಂಬದಿ ಸವಾರ ದೀಕ್ಷಿತ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article