ಗಾಯಕ ಉಪ್ಪುಂದ ರಾಜೇಶ್ ಪಡಿಯಾರ್ ಅವರಿಗೆ ಗೌರವ

ಗಾಯಕ ಉಪ್ಪುಂದ ರಾಜೇಶ್ ಪಡಿಯಾರ್ ಅವರಿಗೆ ಗೌರವ


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.2 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಮೈಸೂರಿನ ಗಾಯಕ ಉಪ್ಪುಂದ ರಾಜೇಶ್ ಪಡಿಯಾರ್ ಅವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದ್ದು, ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು. 

ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್‌ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article