ಸಾಮರಸ್ಯದ ಸಂಕೇತವೇ ಈ ಭಜನೆ: ಪ್ರೊ. ಪವನ್ ಕಿರಣಕೆರೆ
ಮನುಷ್ಯನ ಮನಸ್ಸಿನಲ್ಲಿರುವ ಅಸೂಯೆ, ಮತ್ಸರಗಳೇ ದುಃಖದ ಮೂಲವಾಗಿದ್ದು, ಅವೆಲ್ಲವನ್ನೂ ಕಳೆಯಲು ಭಜನೆ ಹಾಗೂ ಆಧ್ಯಾತ್ಮದಿಂದ ಮಾತ್ರ ಸಾಧ್ಯ. ಸುಖದಲ್ಲಿ ಹಿಗ್ಗದೆ, ಕಷ್ಟ ಬಂದಾಗ ಕುಗ್ಗದೆ ಎಲ್ಲವನ್ನೂ ಸಮಚಿತ್ತವಾಗಿ ಸ್ವೀಕರಿಸುವ ಮೂಲಕ ಸಾಮರಸ್ಯದ ಬದುಕನ್ನು ಭಜನೆಯಿಂದ ಕಂಡುಕೊಳ್ಳಬಹುದಾಗಿದೆ. ಭಗವಂತನ ದೃಷ್ಟಿಯಲ್ಲಿ ಭಕ್ತಿಗೆ ಪ್ರಾಧಾನ್ಯತೆಯೇ ಹೊರತು ಯಾವುದೇ ಆಡಂಬರದ ಆಚರಣೆಗಳಿಗಲ್ಲ. ಭಗವಂತನನ್ನು ಒಲಿಸಿಕೊಳ್ಳಲು ಶ್ರದ್ಧೆಯೇ ಅತ್ಯಂತ ಉತ್ತಮ ಹಾದಿಯಾಗಿದೆ ಎಂದು ಎಲ್ಲಾ ಶಿಬಿರಾರ್ಥಿಗಳಿಗೆ ಭೋದಿಸಿದರು.
ರಾಜ್ಯಾದ್ಯಂತ ಎಲ್ಲಾ ಭಕ್ತರನ್ನು ಒಗ್ಗೂಡಿಸಿ ಎಲ್ಲರ ಮಾನಸಿಕ ಶುದ್ಧತೆಯನ್ನು ಕಾಪಾಡುವ ಮೂಲಕ ಭಜನಾ ಕಮ್ಮಟವು ಅತಿ ಮುಖ್ಯ ಪಾತ್ರ ವಹಿಸಿದ್ದು, ಈ ಕಮ್ಮಟವನ್ನು ಪರ್ವವಾಗಿಸುವಲ್ಲಿ ಕಾರಣಿಭೂತರಾದ ಹೆಗ್ಗಡೆ ದಂಪತಿಗಳ ಪರಿಶ್ರಮ ಬಲು ದೊಡ್ಡದು ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಹಿಂದಿನ ೨೭ನೇ ವರ್ಷದ ಭಜನಾ ಕಮ್ಮಟದಲ್ಲಿ ಭಾಗಿಯಾಗಿ ಸಾರ್ಥಕತೆಯನ್ನು ಕಂಡ ಹೇಮಂತ್ ಸುಳ್ಯ ತನ್ನ ಅನುಭವದ ಮಾತುಗಳನ್ನಾಡಿದರು.
ಸಂಗೀತ ವಿದುಷಿ ಉಷಾ ಹೆಬ್ಬಾರ್, ಭಜನಾ ಕಮ್ಮಟ ಸಮಿತಿ ಸಂಚಾಲಕ ಸುಬ್ರಮಣ್ಯ ಪ್ರಸಾದ್, ಸಮಿತಿಯ ಸರ್ವ ಸದಸ್ಯರು ಹಾಗೂ ಶಿಬಿರಾರ್ಥಿಗಳು ಭಾಗಿಯಾಗಿದ್ದರು.
